ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆ ಸ್ಮಾರ್ಟ್ ಸಿಟಿ ಯೋಜನೆಯ ಪೂರಕ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆ.೧೭ರ ನಾಳೆ ಬೆಳಿಗ್ಗೆ ೯ ರಿಂದ ಸಂಜೆ ೬ ರವರೆಗೆ ಈ ಪ್ರದೇಶದ ವ್ಯಾಪ್ತಿಗೊಳಪಡುವ ಗಾರ್ಡನೆ ಏರಿಯಾದ ಎಲ್ಲಾ ಅಡ್ಡ ರಸ್ತೆಗಳು, ಎಲ್‌ಎಲ್‌ಆರ್‌ರಸ್ತೆಯ, ಅಮೀರ್ ಅಹ್ಮದ್ ವೃತ್ತದಿಂದ ಗೋಪಿ ವೃತ್ತಕ್ಕೆ ಹೋಗು ಎಡಭಾಗದ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ. ಉ ವಿ.-೨ರ ಸಹಾಯಕ ಇಂಜಿನಿಯರ್‌ರವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post