ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2020-21ನೇ ಸಾಲಿನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಎಲ್ಲಾ ವಿಶ್ವವಿದ್ಯಾಲಯ, ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮದೇ ಆದ ಹಾಸ್ಟೆಲ್ ವ್ಯವಸ್ಥೆಯನ್ನು ಹೊಂದಿದ್ದಲ್ಲಿ, ಕೂಡಲೇ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ, Integrated Hostel Management System (ಏಕೀಕೃತ ವಸತಿನಿಲಯ ಮಾಹಿತಿ ನಿರ್ವಹಣಾ ವ್ಯವಸ್ಥೆ)ರಲ್ಲಿ ತಮ್ಮ ಹಾಸ್ಟೆಲ್ ವಿವರಗಳನ್ನು ಒದಗಿಸಿ, ತಂತ್ರಾಂಶದಲ್ಲಿ ಕೂಡಲೇ ನೊಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವಲ್ಲಿ ಆಗಬಹುದಾದ ತೊಂದರೆಗೆ ಆಯಾ ವಿಶ್ವವಿದ್ಯಾಲಯ, ಕಾಲೇಜುಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post