ಶಿವಮೊಗ್ಗ: ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‍ನ ಉದ್ದಕ್ಕೂ ಪ್ಲಾಸ್ಟಿಕ್ ಬಂಟಿಂಗ್ಸ್ ಕಟ್ಟಿರುವುದನ್ನು ವಿರೋಧಿಸಿ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈದ್ ಮಿಲಾದ್ ಪ್ರಯುಕ್ತ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಹಸಿರು ಬಂಟಿಂಗ್ಸ್ ಗಳನ್ನು ಕಟ್ಟಲಾಗಿದೆ. ಇದನ್ನು ವಿರೋಧಿಸಿರುವ ಬಜರಂಗ ದಳ ಹಾಗೂ ವಿಶ್ವಹಿಂದೂ ಪರಿಷತ್, ಮುಸ್ಲೀಮರು ಗಾಂಧಿ ಬಜಾರನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರೆ. ಇದನ್ನು ನಾವು ವಿರೋಧಿಸುತ್ತೇವೆ. ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕಿಡಿದ್ದಾರೆ.

ಬಜರಂಗದಳ ಜಿಲ್ಲಾಧ್ಯಕ್ಷ ದೀನದಯಾಳು, ಪ್ರಮುಖರಾದ ಇ. ವಿಶ್ವಾಸ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿ, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ.

ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಅಗತ್ಯವಿರುವ ಪೊಲೀಸ್ ರನ್ನು ನಿಯೋಜಿಸಿ, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.
ಪ್ರಕರಣ ಕುರಿತಂತೆ ಇಂದು ಸಂಜೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
Rani KoHEnur Calls Transgender Bill “Absurd”, Questions Lawmakers in Explosive Podcast Interview
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetails













