ಶಿವಮೊಗ್ಗ: ಪಲ್ಸ್ ಪೋಲಿಯಾ ಲಸಿಕಾ ಅಭಿಯಾನಕ್ಕೆ ಹೊಸಮನೆ ಬಡಾವಣೆಯಲ್ಲಿ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ, ಐದು ವರ್ಷವಾಗುವವರೆಗೂ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸಬೇಕು. ಈಗಾಗಲೇ ದೇಶದಲ್ಲಿ ಪೋಲಿಯೋ ನಿರ್ಮೂಲನೆಯಾಗಿದೆ. ಇದು ಮತ್ತೆ ಬಾರದಂತೆ ತಡೆಯಲು ಎಲ್ಲರ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್ ಅಂಗನವಾಡಿ ಕೇಂದ್ರದ ಮುಖ್ಯಸ್ಥರಾದ ಶಾಂತ ಸಮಾಧಾನ ಇತರರು ಉಪಸ್ಥಿತರಿದ್ದರು.
Discussion about this post