ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೇ ನಾಳೆ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆ ಶಾಂತಿಪ್ರಿಯ ಜಿಲ್ಲೆಯಾಗಿದ್ದು, ಜನರು ಶಾಂತಿ ಕಾಪಾಡುವಂತೆ ಜನರಲ್ಲಿ ಸಚಿವರು ಮನವಿ ಮಾಡಿದರು.
ಮೆಗ್ಗಾನ್ ಆಸ್ಪತ್ರೆಗೆ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದು, ಗಾಯಾಳು ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post