ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಯುವ ಕಾಂಗ್ರೆಸ್ ಮುಖಂಡ, ಎನ್‌ಎಸ್‌ಯುಐನ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚೇತನ್ ಗೌಡ ಅವರನ್ನು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹಲವಾರು ವರ್ಷಗಳಿಂದ ಒಕ್ಕಲಿಗರ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಇವರು, ಕೋವಿಡ್-19 ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್ ಸಮಯದಲ್ಲಿ ಚೇತನ್ ಅವರ ನೇತೃತ್ವದ ಒಕ್ಕಲಿಗರ ಯುವ ವೇದಿಕೆ ಮತ್ತು ಎನ್‌ಎಸ್‌ಯುಐ ಸಂಘಟನೆ ವತಿಯಿಂದ ಕೂಲಿ ಕಾರ್ಮಿಕರು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದಿನ ನಿತ್ಯದ ಸಾಮಾಗ್ರಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗಿದೆ.
ಇವರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಜಿಲ್ಲೆಯ ಪ್ರಮುಖ ಒಕ್ಕಲಿಗ ಮುಖಂಡರು ಸರ್ವಾನುಮತದಿಂದ ಒಪ್ಪಿ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಆಯ್ಕೆಯಾದ ೨೧ ನಿರ್ದೇಶಕರುಗಳ ಪೈಕಿ ಚೇತನ್ ಗೌಡ ರವರು ಅತೀ ಕಿರಿಯ ವಯಸ್ಸಿನ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಭಿನಂದನೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post