ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ-ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಈ ಪರಿಕಲ್ಪನೆಯ ಅಂಗವಾಗಿ ಫೆ.೨೦ರ ಶನಿವಾರ ಬೆಳಗ್ಗೆ 11ಕ್ಕೆ ಶಿಕಾರಿಪುರ ತಾಲೂಕು, ಉಡುಗಣಿಯ ತಡಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಆದ್ದರಿಂದ ತಡಸನಹಳ್ಳಿಯ ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ಫೆ. 20 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















