ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸರ್ಕಾರ ಮಾಡದ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಾಡುತ್ತಿದ್ದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಎಸ್. ಜನಾರ್ಧನ ಹೇಳಿದರು.
ತಾಲೂಕಿನ ದೊಡ್ಡೇರಿ ಗ್ರಾಮದ ಸಮೀಪದಲ್ಲಿ ಧರ್ಮಸ್ಥಳ ಗ್ರಾಮಿಣಾಭಿವೃದ್ದಿ ಬಿ.ಸಿ ಟ್ರಸ್ಟ್ ನ ವತಿಯಿಂದ ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ 308ನೇ ಕೆರೆ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಸಂಘದ ವತಿಯಿಂದ 25 ಕೋಟಿ ವ್ಯಚ್ಚದಲ್ಲಿ ರಾಜ್ಯದಲ್ಲಿ ಸುಮಾರು 308 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ರಾಜರ ಕಾಲದಲ್ಲಿ ನಿರ್ಮಾಣವಾದ ಹಲವಾರು ಕೆರೆಗಳು ಇಂದು ಕಾಣದಾಗಿವೆ. ಇಂತಹ ಕೆರೆಗಳನ್ನು ಗುರುತಿಸಿ, ಸ್ವಚ್ಚ ಮಾಡಲಾಗುತ್ತಿದೆ. ಇದರಿಂದ ಊಳು ತುಂಬಿದ ಕೆರೆಗಳು ಸ್ವಚ್ಚವಾಗಿ, ಮಳೆ ಬಂದಾಗ ಹೆಚ್ಚಿನ ನೀರು ಸಂಗ್ರಹವಾಗುತ್ತದೆ. ಜನ-ಜಾನುವಾರುಗಳಿಗೆ ರೈತ ಕೃಷಿ ಜಮೀನುಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸುಮಾರು ಏಳು ಲಕ್ಷ ಹಣವನ್ನು ಕೆರೆ ಪುನಶ್ಚೇತನಕ್ಕೆ ನೀಡಲಾಗುತ್ತದೆ. ಜೊತೆಗೆ ಕೆರೆ ಅಭಿವೃದ್ಧಿ ಸಮಿತಿಯಿಂದ ಕೆರೆ ಅಭಿವೃದ್ಧಿಗೆ ಸಹಕಾರ ನೀಡಲಾಗುತ್ತದೆ. ಕೆರೆಯಿಂದ ತೆಗೆದ ಮಣ್ಣನ್ನು ರೈತರು ತೆಗೆದುಕೊಂಡು ತಮ್ಮ ಜಮೀನುಗಳಿಗೆ ಬಳಸಿಕೊಳ್ಳಬಹುದು ಎಂದರು.
ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ಹಲವಾರು ಆಭಿವೃದ್ದಿ ಕಾರ್ಯಗಳನ್ನು ಮಾಡುತ್ತದೆ. ಹಾಗೆಯೆ ದೊಡ್ಡೇರಿ ಕೆರೆ ಪುನಃಶ್ಚೇತನಕ್ಕೆ ಆಯ್ಕೆ ಮಾಡಿಕೊಂಡಿರುವುದು ನಮ್ಮೆಲ್ಲರ ಅದೃಷ್ಟ. ಕೆರೆ ಅಭಿವೃದ್ದಿಗೆ ಎಲ್ಲಾರೂ ಸಹಕರಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಗದ್ದಿಗೆ ತಿಪ್ಪೇಸ್ವಾಮಿ, ಗ್ರಾಮಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ಪಿಡಿಓ ಪಾಲಯ್ಯ, ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ತಾಲ್ಲೂಕು ಯೋಜನೆ ಅಧಿಕಾರಿ ಲತ ಬಂಗೇರ, ಫಕೀರಪ್ಪ, ಗ್ರಾಮಪಂಚಾಯಿತಿ ಸದಸ್ಯರು, ಕೆರೆ ಸಮಿತಿ ಸದಸ್ಯರು ಸೇವಾ ಪತ್ರಿನಿಧಿಗಳು ಗ್ರಾಮಸ್ಥರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post