ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2020-21ನೇ ಸಾಲಿನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು www.ssp.karnataka.gov.inರಲ್ಲಿ ಅರ್ಜಿ ಸಲ್ಲಿಸಿ, ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಿ ಇ-ದೃಢೀಕರಣವನ್ನು ಪಡೆಯುವಂತೆ ತಿಳಿಸಲಾಗಿದೆ.
ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, 2004ರವರೆಗೆ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, 2010ರವರಗೆ ಪಿಯುಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಹೊರ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿಯುಸಿ, ಪದವಿ, ಇತರೆ ಕೋರ್ಸುಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ Stand Alone Institute ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-279222 ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post