ಶಿವಮೊಗ್ಗ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ರವಿ.M.ರವರ 2ನೇ ಪುತ್ರ ಪ್ರಪುಲ್ಲ (7ವರ್ಷ) ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಪ್ರಪುಲ್ಲಾ ಅವರ ಅಂತಿಮ ದರ್ಶನ ಪಡೆಯಲು ಇಂದು ಬೆಳಿಗ್ಗೆ ಜಿಲ್ಲಾ ಸರ್ಕಾರಿ ನೌಕರರ ಸಂಘ ಶಿವಮೊಗ್ಗದ ಹತ್ತಿರ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಆಯನೂರು ಮಂಜುನಾಥ್, ಅಶೋಕ್ ನಾಯ್ಕ್ , ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಖಜಾಂಚಿ ಶಾಂತರಾಜ್, ಮಾಜಿ ಅಧ್ಯಕ್ಷ ರಘುರಾಮ್ ದೇವಾಡಿಗ ಹಾಗೂ ಪದಾದಿಕಾರಿಗಳು, ಶಿಕ್ಷಕರು, ಸರ್ಕಾರಿ ನೌಕರರು ಆಗಮಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.
ನಂತರ ಅವರ ಸ್ವಗ್ರಾಮವಾದ ಹೊನ್ನಾಳಿ ತಾ. ಬೇಲಿಮಲ್ಲೂರಿನ ಸ್ವ ಗ್ರಾಮಕ್ಜೆ ತೆಗೆದುಕೊಂಡು ಹೋದರು. ಅಲ್ಲಿ ಅವರ ಅಂತ್ಯ ಸಂಸ್ಕಾರ ನಡೆಸಲು ವ್ಯವಸ್ಥೆ ಮಾಡಲಾಗಿದೆ.
Discussion about this post