ಶಿವಮೊಗ್ಗ: ಶಿವಮೊಗ್ಗದಿಂದ ತಿರುಪತಿ, ಚೆನ್ನೈಗೆ ನೇರ ರೈಲು ಸಂಚಾರ ಆರಂಭವಾಗಬೇಕು ಎಂಬ ಮಲೆನಾಡಿಗರ ಬಹು ವರ್ಷಗಳ ಬೇಡಿಕೆಗೆ ಸ್ಪಂದಿಸಿ, ಅತಿ ಕಡಿಮೆ ಅವಧಿಯಲ್ಲಿ ಇದನ್ನು ಸಾಕಾರಗೊಳಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ಈ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ.
ಇಂದು ಮುಂಜಾನೆ ನಗರ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದ ನಂತರ ನೂತನ ರೈಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೃಹತ್ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ವಿಶೇಷ ಎಕ್ಸ್’ಪ್ರೆಸ್ ರೈಲುಗಳು ಈಗ ಶಿವಮೊಗ್ಗದಂತಹ ನಗರಗಳಿಗೂ ಸಹ ವಿಸ್ತರಣೆಯಾದೆ. ಇದರೊಂದಿಗೆ ಅಗತ್ಯವಿರುವ ವಾರಕ್ಕೊಮ್ಮೆ ಓಡಾಡುವ ಇನ್ನೂ ವಿಶೇಷ ರೈಲುಗಳ ಓಡಾಡ ಆರಂಭಿಸಲು ಅಧಿಕಾರಿಗಳೊಂದಿಗೆ ಚಚೆರ್ ನಡೆಸಿದ್ದೇನೆ ಎಂದರು.
ವೇದಿಕೆ ಕಾರ್ಯಕ್ರಮದ ನಂತರ ಶಿವಮೊಗ್ಗದಿಂದ ಚೆನ್ನೈ, ಶಿವಮೊಗ್ಗದಿಂದ ತಿರುಪತಿ ಹಾಗೂ ಶಿವಮೊಗ್ಗದಿಂದ ಮೈಸೂರಿಗೆ ವೀಕ್ಲಿ ಸ್ಪೆಶಲ್ ಎಕ್ಸ್’ಪ್ರೆಸ್ ರೈಲುಗಳಿಗೆ ಸಂಸದರು ಚಾಲನೆ ನೀಡಿದರು.
ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್, ರಾಜ್ಯ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪಾಲಿಕೆ ಉಪಮೇಯರ್ ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತ ಕುಮಾರ್, ರೈಲ್ವೆ ಸಲಹಾ ಸಮಿತಿ ಸದಸ್ಯ ಮಾಲತೇಶ್, ಸೇರಿದಂತೆ ಜನಪ್ರತಿನಿಧಿಗಳು ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ನೂತನ ರೈಲುಗಳ ವೇಳಾಪಟ್ಟಿ ಇಂತಿದೆ:
Get In Touch With Us info@kalpa.news Whatsapp: 9481252093, 94487 22200
Discussion about this post