ಕಲ್ಪ ಮೀಡಿಯಾ ಹೌಸ್ | ಶಿರಾಡಿ |
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ #National Highway 75 Shiradi Ghat ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಇಂದು ಮುಂಜಾನೆ ಬೆಂಗಳೂರಿನಿAದ ಬಂಟ್ವಾಳ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ತಾಯಿ ಶಫಿಯಾ ಹಾಗೂ ಮಗ ಶೌಫಿಕ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕೊಂಡಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
Also read: ಮೇ 23ರವರೆಗೂ ಶಿವಮೊಗ್ಗದಲ್ಲಿ ಭಾರೀ ಮಳೆ ಮುನ್ಸೂಚನೆ | ಇಂದು ಆರೆಂಜ್ ಅಲರ್ಟ್
ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.
ಕಾರು ಶಿರಾಡಿ ಘಾಟ್ ಕೆಂಪುಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ನೆಲ್ಯಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post