ಕಲ್ಪ ಮೀಡಿಯಾ ಹೌಸ್ | ಶಿರಾಡಿಘಾಟ್ |
ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯ ಶಿರಾಡಿಘಾಟ್’ನಲ್ಲಿ ತುಂಬಿದ ಗ್ಯಾಸ್ ಟ್ಯಾಂಕರ್ ನಡು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಇಂದು ಮಧ್ಯರಾತ್ರಿವರೆಗೂ ಈ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.
ತಾಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ತಡೆಯಲು ಅಗ್ನಿಶಾಮಕ ಸಿಬ್ಬಂದಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Also read: ಹಾವೇರಿಯಿಂದ ಕಾಂತೇಶ್’ಗೆ ಟಿಕೇಟ್ ಕೈತಪ್ಪುವ ವದಂತಿ | ಈಶ್ವರಪ್ಪ ಹೇಳಿದ್ದೇನು?
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಹೋಗಿದ್ದು ಮಂಗಳೂರಿನ ಎಂಆರ್’ಪಿಎಲ್ ನಿಂದ ತಜ್ಞರ ತಂಡ ಆಗಮಿಸಿದ್ದು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಮಧ್ಯರಾತ್ರಿವರೆಗೂ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಹಾಸನ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಬದಲ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post