ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಇಲ್ಲಿಗೆ ಸಮೀಪದ ಜಾವಗಟ್ಟಿ ಬಳಿಯ ದೇವಿಕೊಪ್ಪ ಗ್ರಾಮದಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನದ ವೇಳೆಗೆ ಘಟನೆ ಸಂಭವಿಸಿದ್ದು, ಮೃತ ವ್ಯಕ್ತಿಯನ್ನು ಶಿವಮೊಗ್ಗದ ಬಸವಪ್ರಸಾದ್ ಎಂದು ಗುರುತಿಸಲಾಗಿದೆ.
Also read: ಶಿವಮೊಗ್ಗ | ಹಾಸ್ಟೆಲ್ ಪ್ರವೇಶಾತಿ ನೀಡಲು ವಿಳಂಬ | ಎಬಿವಿಪಿ ಆಕ್ರೋಶ
ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅಪಘಾತದ ತೀವ್ರತೆಯನ್ನು ಇದು ಸಾರುತ್ತಿದೆ. ಢಿಕ್ಕಿಯ ರಭಸಕ್ಕೆ ಖಾಸಗಿ ಬಸ್ ಸಹ ಪಲ್ಟಿಯಾಗಿದ್ದು, ಪರಿಣಾಮವಾಗಿ ಹಲವರಿಗೆ ಗಾಯಗಳಾಗಿವೆ.
ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post