ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಸ್ವಂತ ಮಾವನನ್ನೇ ಕುತ್ತಿಗೆ ಸೀಳಿ ಅಳಿಯನೊಬ್ಬ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಶಿರಾಳಕೊಪ್ಪ ಬಳಿಯ ಬಿಳಿಕಿ ಗ್ರಾಮದಲ್ಲಿ ನಡೆದಿದೆ.
ಕುತ್ತಿಗೆ ಸೀಳಿದ ಆರೋಪಿ ಅಳಿಯನನ್ನು ಮಾಲತೇಶ್ ಹಾಗೂ ಮಾವನನ್ನು ಚನ್ನಾನಾಯ್ಕ(72) ಎಂದು ಗುರುತಿಸಲಾಗಿದೆ.
ಕುಡಿದ ಮತ್ತಿನಲ್ಲಿದ್ದ ಅಳಿಯ ಮಾಲತೇಶ್ ಕ್ಲುಲ್ಲಕ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
Also read: ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು
ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡಿರುವ ಚನ್ನಾನಾಯ್ಕ ಅವರನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.
ಆರೋಪಿ ಮಾಲತೇಶನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















