ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಬೈಕ್ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟಿದ್ದು, ಅಪಘಾತಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿಳಕಿ ಗ್ರಾಮದ ಗ್ರಾಮ ಒನ್ ರಲ್ಲಿ ಕೆಲಸ ಮಾಡುತ್ತಿದ್ದ ಲೀಲಾ ಎಂಬ ಮಹಿಳೆ ಕೆಲಸಕ್ಕಾಗಿ ಬೈಕ್‌ನ ಹಿಂಬದಿಯಲ್ಲಿ ಕುಳಿತು ಹೋಗುತ್ತಿದ್ದಾಗ ಬಿಳಕಿ ಗ್ರಾಮದ ಕ್ರಾಸ್ ಹತ್ತಿರ ಬೈಕ್ ಗುಂಡಿಗೆ ಬಿದ್ದಿದ್ದರಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಸ್ತೆ ಸರಿಯಾಗಿಲ್ಲದ ಕಾರಣ ಲೀಲಾ ಮರಣ ಹೊಂದಿದ್ದಾರೆ ಎಂದು ಆರೋಪಿಸಿ ಶಿರಾಳಕೊಪ್ಪ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಅ.22ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ











Discussion about this post