ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಬಗ್ಗೆ ಕೀಳು ಮಟ್ಟದ ಮಾತುಗಳನ್ನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾವೀರ್ ವೃತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹನ ಮಾಡುವ ಮುಖಾಂತರ ಪ್ರತಿಭಟಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್, ಮಹಾನಗರಪಾಲಿಕೆ ಸದಸ್ಯರು, ಮಾಜಿ ಸದಸ್ಯರು , ಚಂದ್ರಬೋಪಾಲ್ , ರಾಮೇಗೌಡರು, ಸೌಗಂಧಿಕಾ , ನಿಹಾಲ್ , ಅನ್ನು, ಸುವರ್ಣ , ಚಿನ್ನಪ್ಪ ಇನ್ನು ಮುಂತಾದವರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















