ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಾವಣಗೆರೆ ಪೂರ್ವ ವಲಯ ಡಿಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೆರೇಡ್ ನ ವೀಕ್ಷಣೆ ನಡೆಸಿ, ಗೌರವ ವಂದನೆ ಸ್ವೀಕರಿಸಿದರು.
ನಂತರ ಡಿಎಆರ್ ಆವರಣದಲ್ಲಿ ಪೊಲೀಸ್ ಇಲಾಖಾ ವಾಹನಗಳ ಪರಿವೀಕ್ಷಣೆ ನಡೆಸಿ, ವಾಹನಗಳನ್ನು ಪರಿಶೀಲಿಸಿ, ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪಿಎಸ್ಐ, ಪಿಐ ಮತ್ತು ಡಿಎಸ್.ಪಿ ರವರೊಂದಿಗೆ ಜಿಲ್ಲಾ ಪೊಲೀಸ್ ನ ಪರಿವೀಕ್ಷಣಾ ಸಭೆ ನಡೆಸಿ, ತನಿಖೆಯಲ್ಲಿರುವ ಪ್ರಕಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಡಿಎಆರ್ ಮತ್ತು ಜಿಲ್ಲಾ ಪೊಲೀಸ್ ಕಛೇರಿಗಳಿಗೆ ಭೇಟಿ ನೀಡಿ ಕಛೇರಿಯ ವಿವಿಧ ಶಾಖೆಗಳ ಪರಿವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post