ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಬಹಳಷ್ಟು ಕಾಮಗಾರಿಗಳು ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕಿರಿಕಿರಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಸೂಚನೆ ನೀಡಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಚಂದ್ರಶೇಖರ್ ಆಜಾದ್ ಪಾರ್ಕ್(ಫ್ರೀಡಂ ಪಾರ್ಕ್) ನ ಅಭಿವೃದ್ಧಿಗಾಗಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನುದಾನವನ್ನು ನೀಡಿದ್ದರು. ಈಗ ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಅನೇಕ ಕಾಮಗಾರಿಯನ್ನು ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ ಎಂದರು.
ಸಾರ್ವಜನಿಕರಿಗೆ ಅನುಕೂಲವಾಗಲು ಈ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಆದರೆ ಸ್ವಚ್ಛತೆ, ವಾಕಿಂಕ್ ಟ್ರಾಕ್, ಕುಡಿಯುವ ನೀರು, ಶೌಚಾಲಯಕ್ಕೆ ಮೊದಲ ಹಂತದಲ್ಲಿ ಆದ್ಯತೆ ನೀಡಲಾಗುವುದು. ಜೊತೆಗೆ 4 ಹಂತದಲ್ಲಿ ಪಾರ್ಕ್ ಕೆಲಸವನ್ನು ಸ್ಮಾರ್ಟ್ ಸಿಟಿ ವತಿಯಿಂದ ಮಾಡುತ್ತಿದ್ದು, ಇಲ್ಲಿ ಆಗುತ್ತಿರುವ ಕಾಮಗಾರಿಗಳು ಸಾರ್ವಜನಿಕರಿಗೆ ಕಿರಿಕಿರಿ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಪ್ರಮುಖರಾದ ಎಸ್. ದತ್ತಾತ್ರಿ, ಪ್ರಮುಖರಾದ ರಾಜೇಶ್ ಕಾಮತ್, ಬಳ್ಳೆಕೆರೆ ಸಂತೋಷ್, ದಿವಾಕರ್ ಶೆಟ್ಟಿ, ಮಾಲತೇಶ್, ಕಾರ್ಪೊರೇಟರ್ ವಿಶ್ವಾಸ್, ಸ್ಮಾರ್ಟ್ ಸಿಟಿ ಎಂ.ಡಿ. ಚಿದಾನಂದ ವಠಾರೆ, ಕುಮಾರ ಸ್ವಾಮಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post