ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ, ಜಿಪಂ ಸದಸ್ಯ ಕೆ.ಈ. ಕಾಂತೇಶ್ ಅವರು ಅದ್ದೂರಿಗಿಂತಲೂ ತಮ್ಮ ಜನ್ಮದಿನವನ್ನು ಇಂದು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.
ಕೊರೋನಾ ಸಂಕಷ್ಟವಿದ್ದರೂ, ಅಭಿಮಾನಿಗಳ ಹಾಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದ ಅವರು, ಹಲವು ರೀತಿಯಲ್ಲಿ ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ತಮ್ಮ ಜನ್ಮದಿನ ಆಚರಿಸಿದ್ದು ವಿಶೇಷ.

ನಗರದ ಮೈಲಾರೇಶ್ವರ ದೇವಾಲಯ ಸಭಾಗಂಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಅಧಿಕ ಪೌರ ಕಾರ್ಮಿಕರನ್ನು ಕಾಂತೇಶ್ ಅವರು ಸನ್ಮಾನಿಸಿದರು.
ಸಾಮಗಾನ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಗರದ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಂಡಿರುವ ಪೌರ ಕಾರ್ಮಿಕರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಆರ್ಶೀವಚನ ನೀಡಿದರು.
ಕೂಲಿ ಕಾರ್ಮಿಕರಿಗೆ ಉಪಹಾರ ವಿತರಣೆ
ಇನ್ನು ಕಾಂತೇಶ್ ಅವರ ಜನ್ಮದಿನದ ಅಂಗವಾಗಿ ಕೂಲಿ ಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಣೆ ಮಾಡಲಾಯಿತು.
ಇಂದು ಮುಂಜಾನೆ ಹೊಳೆ ಬಸ್ ನಿಲ್ದಾಣದ ಬಳಿಯಲ್ಲಿ ಕೂಲಿ ಕಾರ್ಮಿಕರಿಗೆ ಸ್ವತಃ ಕಾಂತೇಶ್ ಅವರು ಉಪಹಾರ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post