ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಪೊಲೀಸರಿಂದ ನಗರದ ಬಸ್‌ನಿಲ್ದಾಣದಲ್ಲಿ ಇಂದು ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು.
ಮಾಸ್ಕ್ ಧರಿಸದೆ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರು ಇಂದು ವಿಭಿನ್ನ ಕಾರ್ಯಾಚರಣೆ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾಸ್ಕ್ ಧರಿಸದೆ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೆ ಮಾಸ್ಕ್ ವಿತರಿಸಿ ಕೊರೋನಾ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಡಿವೈಎಸ್‌ಪಿ ಪ್ರಶಾಂತ್ ಮತ್ತು ಪೊಲೀಸರ ತಂಡ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಬಧಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರನ್ನು ಗಮನಿಸಿದರು. ನಂತರ ಮಾಸ್ಕ್ ಧರಿಸದವರಿಗೆ ತಿಳಿ ಹೇಳಿ, ಮಾಸ್ಕ್ ವಿತರಿಸಿದರು.
ಮಾಸ್ಕ್ ಹಾಕಿಕೊಳ್ಳದೆ ಬಸ್ಸಿಗಾಗಿ ಕಾದು ಕೂತಿದ್ದ ಮಕ್ಕಳಿಗೆ ಹೆಚ್ಚುವರಿ ಎಸ್‌ಪಿ ಡಾ. ಶೇಖರ್ ಅವರೇ ಮಾಸ್ಕ್ ತೊಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post