ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಲಿಂಗನಮಕ್ಕಿ ಜಲಾಶಯ #Linganamakki Dam ಭರ್ತಿಯಾಗಿದ್ದು, ಮೂರು ಗೇಟ್ ಮೂಲಕ ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಜಲಾಶಯದಿಂದ ನದಿಗೆ ನೀರು ಹರಿಸುವ ಮುನ್ನ ಗೇಟ್ ಗಳಿಗೆ ಪೂಜೆ ಸಲ್ಲಿಸಲಾಯಿತು. ಜಲಾಶಯದಿಂದ ನೀರು ಹರಿಸುವುದನ್ನು ನೋಡಲು ಜನ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನೀರು ಧುಮುಕುವುದನ್ನ ನೋಡಿ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿದೆ.
Also read: ಭದ್ರಾ ಡ್ಯಾಂನಿಂದ ವಾಣಿವಿಲಾಸ ಸಾಗರಕ್ಕೆ ನೀರು | ಯಾವೆಲ್ಲಾ ಪ್ರದೇಶಗಳಿಗೆ ಉಪಯೋಗ?
ಇಡೀ ರಾಜ್ಯಕ್ಕೆ ಶೇ.30 ರಷ್ಟು ವಿದ್ಯುತ್ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯಕ್ಕೆ 53 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1819 ಸಾಮರ್ಥ್ಯದ ಜಲಾಶಯ ಇಂದು 1814 ಅಡಿ ತುಂಬಿದ್ದು, ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post