ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜೂ.23ರ ಬೆಳಿಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆ, ಸಂಘದ ನವಿಕೃತ ಭವನದ ಉದ್ಘಾಟನೆ, ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ #C S Shadakshari ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗೂ ನವೀಕೃತ ಸರ್ಕಾರಿ ನೌಕರರ ಭವನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹಾಗೂ ಡಿ.ಎಸ್. ಅರುಣ್ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ ಎಂದರು.

Also read: ಜೂನ್ 21 | ಶುಭಮಂಗಳ ಸಮುದಾಯ ಭವನದಲ್ಲಿ ಯೋಗ ದಿನಾಚರಣೆ | ಅನಿಲ್‍ಕುಮಾರ್ ಶೆಟ್ಟರ್
ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್, ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‍ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ. ಕೃಷ್ಣಮೂರ್ತಿ, ಪದಾಧಿಕಾರಿಗಳಾದ ಆರ್. ಪಾಪಣ್ಣ, ಉದಯಸಿಂಗ್, ಸಿ.ಎ. ಹಿರೇಮಠ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post