ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಮಲೆನಾಡು ಕಂಡ ಅತಿ ಆಕರ್ಷಣೀಯ ಹಾಗೂ ವಿಶೇಷತೆ ಹೊಂದಿರುವ ಪಟಗುಪ್ಪ ಸೇತುವೆ ನಾಳೆ ಲೋಕಾರ್ಪಣೆಗೊಳ್ಳಲಿದ್ದು, 11 ವರ್ಷಗಳ ಹಿಂದೆ ಶಾಸಕ ಹರತಾಳು ಹಾಲಪ್ಪ ಇವರ ನೇತೃತ್ವದ ಆರಂಭವಾದ ಬಹು ನಿರೀಕ್ಷಿತ ಕಾಮಗಾರಿ ಹಲವು ಅಡೆತಡೆಗಳ ನಡುವೆಯೂ ಯಶಸ್ವಿಯಾಗಿ ಪೂರ್ಣಗೊಂಡಿದ್ದು ಇದರ ಹೆಗ್ಗಳಿಕೆ ಹಾಲಪ್ಪ ಅವರಿಗೆ ಸಲ್ಲುತ್ತದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನ ಅತಿ ಉದ್ದ ಹಾಗೂ ಎತ್ತರದ ಸೇತುವೆ ಇದಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಬಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಆಹಾರ ಮೇಳ, ಹಿನ್ನೀರಿನಲ್ಲಿ ದೋಣಿ ವಿಹಾರ ಏರ್ಪಡಿಸಲಾಗಿದ್ದು, ರಾಜ್ಯದ ಪ್ರಸಿದ್ಧ ಗಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















