ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಜಿಲ್ಲೆಯಲ್ಲೂ ಸಹ ಹೊಸ ವರ್ಷಾಚರಣೆಗೆ ಕೆಲವು ರೂಲ್ಸ್ ಜಾರಿ ಮಾಡಲಾಗಿದೆ.
ಈ ಕುರಿತಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಹಲವು ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಡಿವೈಎಸ್’ಪಿ, ಡಿಸಿಆರ್’ಬಿ ಮತ್ತು ಡಿವೈಎಸ್’ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು ಹಾಜರಿದ್ದರು.


ಸಭೆಯಲ್ಲಿ ಎಸ್’ಪಿ ನೀಡಿದ ಸೂಚನೆಗಳೇನು?
- ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 1 ಗಂಟೆಯ ಒಳಗಾಗಿ ಮುಕ್ತಾಯಗೊಳಿಸಬೇಕು
- ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು
- ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸುವಂತಿಲ್ಲ
- ಮಧ್ಯ ಮಾರಾಟವನ್ನು ರಾತ್ರಿ 11:30 ರ ವರೆಗೆ ಮಾತ್ರ ಮಾಡಬೇಕು
- ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡಬೇಕು
- ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂಗಳನ್ನು ಬಳಸುವಂತಿಲ್ಲ
- ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು
- ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸಬೇಕು
- ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು
- 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತ
- ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್’ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕಬೇಕು
- ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್’ಗೆ ಒಳಪಡಿಸಬೇಕು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post