ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 12ರಿಂದ 22ರವರೆಗೂ ಜಿಲ್ಲಾಧಿಕಾರಿಗಳ ಕಚೇರಿ ಆವರಣರದ 100 ಮೀಟರ್ ವ್ಯಾಪ್ತಿಯ ಸುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 12ರ ಬೆಳಗ್ಗೆ 6 ಗಂಟೆಯಿಂದ 22ರ ಸಂಜೆ 6 ಗಂಟೆವರೆಗೂ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ 100 ಮೀಟರ್ ಸುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post