ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಜೈನ್ ಪಬ್ಲಿಕ್ ಶಾಲೆಯ Jain Public School 9ನೇ ತರಗತಿ ವಿದ್ಯಾರ್ಥಿನಿ ಮದಿಹ ಇಬ್ರಾಹಿಂಗೆ ರಾಷ್ಟ್ರಮಟ್ಟದ ಕಟ ವಿಭಾಗದಲ್ಲಿ ತೃತೀಯ ಬಹುಮಾನ ಮತ್ತು 6ನೇ ತರಗತಿ ವಿದ್ಯಾರ್ಥಿ ಪ್ರಣವ್ ಎ ಗೆ ದ್ವಿತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸೃಜನಶೀಲ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಲು ಹಾಗೂ ಪ್ರಸ್ತುತ ಜಗತ್ತಿಗೆ ಅಗತ್ಯವಿರುವ ಕೌಶಲ್ಯಗಳನ್ನು ಒದಗಿಸಲು ಹಲವಾರು ವೈವಿಧ್ಯಮಯವಾದ ಶಿಕ್ಷಣ ಹಾಗೂ ಶಿಕ್ಷಣದ ಚಟುವಟಿಕೆಗಳನ್ನು ನೀಡುತ್ತಿರುವುದು ಈ ಸಂಸ್ಥೆಯ ವೈಶಿಷ್ಟ್ಯವಾಗಿದೆ. ಇಂತಹ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲು ಸಹಕರಿಸಿದ ಪೋಷಕರಿಗೆ, ವಿದ್ಯಾರ್ಥಿಗಳಿಗೆ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.
Also read: ಭರದಿಂದ ಸಾಗಿದ ‘ಬಯಸದೇ ಬಂದ ರಾಜಯೋಗ’ ಚಿತ್ರೀಕರಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post