ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕು ಬ್ರಾಹ್ಮಣ ಸೇವಾ ಸಂಘದ ವತಿಯಿಂದ ಡಿ.30ರಂದು 2022ರ ನೂತನ ಕ್ಯಾಲೆಂಡರ್ ಬಿಡುಗಡೆ ಮತ್ತು ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಲಾಗಿದೆ.
ಕೋಟೆ ರಸ್ತೆಯ, ಗಾಯತ್ರೀ ಧ್ಯಾನಮಂದಿರದಲ್ಲಿ ಸಂಜೆ 6:30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ತಾಲ್ಲೂಕು ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಕೆ. ವೆಂಕಟೇಶ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್, ಹೊಯ್ಸಳ ಸೊಸೈಟಿ ಅಧ್ಯಕ್ಷ ಎಂ. ಶಂಕರ್, ಸರ್.ಎಂ. ವಿಶ್ವೇಶ್ವರ ಸೊಸೈಟಿ ಅಧ್ಯಕ್ಷ ಡಾ. ಹೆಚ್.ಕೆ. ರವಿಕಿರಣ್, ಕರ್ನಾಟಕ ಸಂಘ ಅಧ್ಯಕ್ಷ ಎಂ.ಎನ್. ಸುಂದರ್‌ರಾಜ್, ಮಲೆನಾಡು ಮುದ್ರಕರ ಸಂಘದ ಅಧ್ಯಕ್ಷ ಎಂ. ಮಾಧವಾಚಾರ್, ಸಮೀರ ಸೊಸೈಟಿ ಅಧ್ಯಕ್ಷ ಹಂಡೆ ಗುರುರಾಜ ಭಾಗವಹಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಹೆಚ್.ಆರ್. ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post