No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇನ್ನೊಂದು ವರ್ಷದಲ್ಲಿ ನಗರದ ಎಲ್ಲ ಮನೆಗಳಿಗೆ 24×7 ಕುಡಿಯುವ ನೀರು: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 19, 2022
in ಶಿವಮೊಗ್ಗ
0
ಇನ್ನೊಂದು ವರ್ಷದಲ್ಲಿ ನಗರದ ಎಲ್ಲ ಮನೆಗಳಿಗೆ 24×7 ಕುಡಿಯುವ ನೀರು: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಹೊರವಲಯಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಯೋಜನೆ ಮತ್ತು ನಗರದ 24×7 ಕುಡಿಯುವ ನೀರು ಯೋಜನೆಗಳಿಂದಾಗಿ ಮುಂದಿನ ವರ್ಷದೊಳಗೆ ಈ ಪ್ರದೇಶಗಳಲ್ಲಿ ಪ್ರತಿ ಮನೆ ಮನೆಗೆ ನಿರಂತರವಾಗಿ ಕುಡಿಯುವ ನೀರು ಸಿಗಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮತ್ತು ಮಹಾನಗರಪಾಲಿಕೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಪಾಲಿಕೆ ವ್ಯಾಪ್ತಿಯ ಹೊರವಲಯದಲ್ಲಿ ಬರುವ ಪ್ರದೇಶಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಸರಬರಾಜು ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವ ರೂ. 96.50 ಕೋಟಿ ಅಂದಾಜು ವೆಚ್ಚದ ಯೋಜನೆ ಕಾಮಗಾರಿಗೆ ಗುಡ್ಡೇಕಲ್ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಗಾರದ ಹತ್ತಿರ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಪ್ರಸ್ತುತ ನಗರದ ಹೊರವಲಯದ ಪ್ರದೇಶಗಳಿಗೆ ಕುಡಿಯುವ ನೀರು ಕಲ್ಪಿಸಲು ರೂ.96.50  ದೊಡ್ಡ ಮೊತ್ತದ ಕಾಮಗಾರಿಯನ್ನು ಶಿವಮೊಗ್ಗಕ್ಕೆ ನೀಡಿರುವ ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಅಧ್ಯಕ್ಷರಾದ ರಾಜುಗೌಡರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಬರುವ ಮಾರ್ಚ್ ಒಳಗೆ ನಗರದಲ್ಲಿ ಪ್ರಗತಿಯಲ್ಲಿರುವ 24×7 ಕುಡಿಯುವ ನೀರು ಸರಬರಾಜು ಯೋಜನೆ ಕೂಡ ಪೂರ್ಣಗೊಳ್ಳಲಿದೆ. ಇನ್ನು ಒಂದು ವರ್ಷದಲ್ಲಿ ಈ ಕಾಮಗಾರಿಯನ್ನೂ ಸಹ ಮುಗಿಸಬೇಕು. ಇದಕ್ಕಾಗಿ ಕಂಟ್ರಾಕ್ಟರ್‍ಗಳಿಗೆ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಇನ್ನೊಂದು ವರ್ಷದಲ್ಲಿ ಎರಡೂ ಕಾಮಗಾರಿಗಳು ಪೂರ್ಣಗೊಂಡು ನಗರದ ಎಲ್ಲ ಮನೆಗಳಿಗೆ ಕುಡಿಯುವ ನೀರು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಹೊರವಲಯದಲ್ಲಿರುವ ವಿರುಪಿನಕೊಪ್ಪ ಮಂಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧ್ಯಕ್ಷರ ಗಮನಕ್ಕೆ ತರಲಾಗಿ, ನೀರು ಸರಬರಾಜು ಕಾಮಗಾರಿಗೆ ಅವರು ರೂ.4 ಕೋಟಿಯನ್ನು ಘೋಷಿಸಿದ್ದಾರೆ. ಆದ್ದರಿಂದ ಮಂಡಿ ಕಾರ್ಮಿಕರ ಪರವಾಗಿ ನಾನು ಅಭಿನಂದನೆ ತಿಳಿಸುತ್ತೇನೆ ಎಂದರು.

ಪ್ರಸ್ತುತ ಗೋವಿಂದಪುರದಲ್ಲಿ ಆಶ್ರಯ ಮನೆ ಕಾಮಗಾರಿ ಪ್ರಗತಿಯಲ್ಲಿದ್ದು ಆಗಸ್ಟ್ ವೇಳೆಗೆ 1600 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಇದು ಗ್ರಾಮೀಣ ಭಾಗಕ್ಕೆ ಸೇರಿದ್ದು ಗ್ರಾಭೀಣಾಭಿವೃದ್ದಿ ಇಲಾಖೆಯಿಂದ ನೀರಿನ ವ್ಯವಸ್ಥೆ ಕಲ್ಪಿಸಲು ರೂ. 16 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಗೋಪಿಶೆಟ್ಟಿಕೊಪ್ಪ ನಗರ ವ್ಯಾಪ್ತಿಗೆ ಸೇರಿದ್ದು ಇಲ್ಲಿ ಸಹ ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ನೀಡಿದ್ದೇವೆ. ಮನೆ ಕಟ್ಟಲು ಆರಂಭಿಸಿದರೆ ನೀರು ಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಸುಮಾರು ರೂ.10 ಕೋಟಿಯನ್ನು ಅಧ್ಯಕ್ಷರು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ನಗರದಲ್ಲಿ ಯುಜಿಡಿ ಸಮಸ್ಯೆ ಸಹ ಇದ್ದು, ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಅಧ್ಯಕ್ಷರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು ಇನ್ನು ಒಂದು ವರ್ಷದ ಒಳಗೆ 24×7 ಕುಡಿಯುವ ನೀರು ಮತ್ತು ನಗರ ಹೊರವಲಯಕ್ಕೆ ನೀರು ಕಲ್ಪಿಸುವ ಈ ಯೋಜನೆ ಪೂರ್ಣಗೊಳ್ಳಲೇ ಬೇಕು. ಈ ನಿಟ್ಟಿನಲ್ಲಿ ಕೆಲಸಗಳು ಚುರುಕಾಗಬೇಕೆಂದು ಸೂಚನೆ ನೀಡಿದರು.

ಶಾಸಕರು ಹಾಗೂ ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ, ಕಳೆದ ಬಾರಿ ಶಿವಮೊಗ್ಗ ಭೇಟಿ ನೀಡಿದ್ದಾಗ ಉಸ್ತುವಾರಿ ಸಚಿವರು ಹೊರವಲಯದ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದರಂತೆ ಈ ಯೋಜನೆಗೆ ಮಂಜೂರಾತಿ ನೀಡಿ ಟೆಂಡರ್ ಕರೆದು, ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಇನ್ನೊಂದು ವರ್ಷದಲ್ಲಿ ಯೋಜನೆ ಪೂರ್ಣಗೊಳ್ಳುವ ವಿಶ್ವಾಸ ಇದೆ.

ಶಿವಮೊಗ್ಗ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಸಂಸದರು, ಶಾಸಕರ ನೇತೃತ್ವದಲ್ಲಿ ನಗರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳಾಗುತ್ತಿವೆ. ಪ್ರಸ್ತುತ ಈ ಯೋಜನೆಯಿಂದ ನಗರ ಹೊರವಲಯದ ಪ್ರದೇಶಗಳಿಗೆ 2035 ನೇ ಸಾಲಿನವರೆಗೆ ನಿರಂತರವಾಗಿ ಕುಡಿಯುವ ನೀರು ದೊರಕಲಿದೆ. ವಿರುಪಿನಕೊಪ್ಪದ ಕುಡಿಯುವ ನೀರಿನ ಯೋಜನೆಗೆ ಕೂಡ ಈ ಯೋಜನೆಯಡಿಯೇ ವ್ಯವಸ್ಥೆ ಮಾಡಲಾಗುವುದು. ಗುಣಮಟ್ಟದ ಕೆಲಸ ಆಗಬೇಕು. ಹಾಗೂ ಪ್ರತಿ ಮನೆಗೆ ಒಂದು ವರ್ಷದಲ್ಲಿ ನೀರು ಸರಬರಾಜಾಗಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಗೆ ಜಲಜೀವನ್ ಮಿಷನ್ ಯೋಜನೆಯಡಿ ರೂ.1200 ಕೋಟಿ ಮಂಜೂರು ಮಾಡಿದ್ದು ಅವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಮಾತನಾಡಿ, ಶಿವಮೊಗ್ಗ ನಗರ ಬೆಳೆಯುತ್ತಿದೆ. ಆದರೆ ಅದಕ್ಕೆ ತಕ್ಕಂತೆ ನೀರಿನ ಸರಬರಾಜು ಇಲ್ಲದೆ ನೀರಿನ ಅಭಾವ ಉಂಟಾಗಿತ್ತು. ನಗರದ ಸುತ್ತಮುತ್ತಲಿನ ಪ್ರದೇಶಗಳಾದ ಜೆ.ಹೆಚ್.ಪಟೇಲ್ ಬಡಾವಣೆ, ಸೋಮಿನಕೊಪ್ಪ, ಪುರಲೆ, ವಾದಿ-ಏ-ಹುದ, ಬೊಮ್ಮನಕಟ್ಟೆ ಇತರೆಡೆ ನೀರಿನ ಕೊರತೆ ಇದ್ದು, ಜನರು ಪಾಲಿಕೆ ಸದಸ್ಯರನ್ನು ಕೇಳುತ್ತಿದ್ದರು. ಈ ಯೋಜನೆಯಿಂದ ನಗರದ ಎಲ್ಲ ಹೊರವಲಯಗಳಿಗೆ ಕುಡಿಯುವ ನೀರಿನ ಸಬರಾಜಾಗಿ ಅನುಕೂಲವಾಗಲಿದೆ. ಇದಕ್ಕಾಗಿ ನಾನು ಸಂಸದರು, ಶಾಸಕರು ಹಾಗೂ ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಪ್ರಾಸ್ತಾವಿಕವಾಗಿ ಮಾತನಾಡಿ, ಪಾಲಿಕೆ ವ್ಯಾಪ್ತಿಯ ಹೊರವಲಯದಲ್ಲಿ ಬರುವ ವಾರ್ಡ್ ಪ್ರದೇಶಗಳು ಅಭಿವೃದ್ದಿ ಹೊಂದುತ್ತಿದ್ದು ಈ ಭಾಗದ ವಸತಿ ಪ್ರದೇಶಗಳಿಗೆ ನೀರು ಪೂರೈಕೆ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಸಚಿವರು ನಗರಾಭಿವೃದ್ದಿ ಸಚಿವರಿಗೆ ಈ ಭಾಗದಲ್ಲಿ 24×7 ಒತ್ತಡಯುಕ್ತ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಲು ಕೋರಿದ್ದರು. ನಗರಾಭಿವೃದ್ದಿ ಸಚಿವರ ಸೂಚನೆಯಂತೆ ಈ ಪ್ರದೇಶದಲ್ಲಿ ಬರುವ 11 ಟ್ಯಾಂಕ್ ಜೋನ್‍ನಲ್ಲಿ ಅವಶ್ಯವಿರುವ 325 ಕಿ.ಮೀ ವಿತರಣಾ ಕೊಳವೆಮಾರ್ಗ ಮತ್ತು 11 ಸಾವಿರ ಮೀಟರ್ ಸಹಿತ ಗೃಹಸಂಪರ್ಕಕ್ಕಾಗಿ ರೂ.96.50 ಕೋಟಿ ಯೋಜನೆ ಅನುಮೋದನೆಗೊಂಡಿರುತ್ತದೆ.

ಯೋಜನೆಯ ಕಾಮಗಾರಿಯನ್ನು ಪ್ಯಾಕೇಜ್ ಟೆಂಡರ್‍ನಲ್ಲಿ ಮೆ. ಗಿಡ್ಡೇಗೌಡ ಕಂಟ್ರಾಕ್ಟರ್ಸ್ ಮತ್ತು ಮೆ. ಶುಭಾ ಸೇಲ್ಸ್ ಇಂಜಿನಿಯರ್ಸ್ ಬೆಂಗಲೂರು ಇವರಿಗೆ ಜಂಟಿ ಸಹಭಾಗಿತ್ವದಲ್ಲಿ ನೀಡಲಾಗಿದ್ದು ಕಾಮಗಾರಿ ಪೂರ್ಣಗೊಳಿಸಲು ಹದಿನೆಂಟು ತಿಂಗಳ ಅವಧಿಯನ್ನು ನಿಗದಿಪಡಿಸಲಾಗಿದೆ. ಇನ್ನು ನಗರದ 24×7 ಕುಡಿಯುವ ನೀರು ಯೋಜನೆ ಕಾಮಗಾರಿಯುವ ಮಾರ್ಚ್ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಪಾಲಿಕೆ ಸ್ಥಾನಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಪಾಲಿಕೆ ಸದಸ್ಯರಾದ ಸುವರ್ಣ ಶಂಕರ್, ಯಮುನಾ ರಂಗೇಗೌಡ, ಹೆಚ್.ಸಿ.ಯೋಗೀಶ್, ಇತರೆ ಪಾಲಿಕೆ ಸದಸ್ಯರು, ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಮುಖ್ಯ ಮತ್ತು ಕಾರ್ಯಪಾಲಕ ಅಭಿಯಂತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share197Tweet123Send
Previous Post

ಗಮನಿಸಿ! ಜ.21ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶ: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶ: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶ: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL