ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾನಗರ ಪಾಲಿಕೆ #Shivamogga Mahanagara Palike ಕಚೇರಿಗಳ ಮೇಲೆ ಸುಮಾರು 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ #Lokayuktha teams visit ನೀಡಿ, ಪರಿಶೀಲನೆ ನಡೆಸಿದ್ದು, ಸಾಲು ಸಾಲು ಪ್ರಶ್ನೆಗಳಿಗೆ ಸಿಬ್ಬಂದಿ ತತ್ತರಿಸಿ ಹೋಗಿದ್ದಾರೆ.
ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿರುವ ಕುರಿತಾಗಿ ಹಲವು ದೂರುಗಳ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳ ಮೂರು ತಂಡ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಹಾನಗರ ಪಾಲಿಕೆಯ ಕಂದಾಯ ವಿಭಾಗ, #RevenueDepartment ಆಡಳಿತ ವಿಭಾಗ, #Administration Department ನ್ಯಾಯಾಂಗ ಶಾಖೆ, ಟಪಾಲು ವಿಭಾಗ, ಸಹಾಯವಾಣಿ ಕೇಂದ್ರ ಹಾಗೂ ನಲ್ಮ್ ವಿಭಾಗ ಸೇರಿದಂತೆ ಪ್ರತಿಯೊಂದು ಕಚೇರಿಯ ಮೇಲೆ ಲೋಕಾಯುಕ್ತರು ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್’ಪಿ ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ ಡಿವೈಎಸ್’ಪಿ ಹಾಗೂ ಮೂವರು ಇನ್ಸೆಪೆಕ್ಟರ್’ಳನ್ನು ಒಳಗೊಂಡ ಪ್ರತ್ಯೇಕ 25ಕ್ಕೂ ಹೆಚ್ಚು ಸಿಬ್ಬಂದಿಯ ತಂಡ ಈ ಕಾರ್ಯಾಚರಣೆಯಲ್ಲಿ ತೊಡಗಿದೆ.
ಲೋಕಾಯುಕ್ತ ಅಧಿಕಾರಿಗಳ ಅನಿರೀಕ್ಷಿತ ಭೇಟಿಯಿಂದ ಪಾಲಿಕೆ ಸಿಬ್ಬಂದಿ ತಬ್ಬಿಬ್ಬಾದರು. ಬಾಕಿ ಇರುವ ಕಡತಗಳೆಷ್ಟು? ಕೆಲಸಗಳು ಏಕೆ ವಿಳಂಬವಾಗುತ್ತಿವೆ? ಎಂಬ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಲಾಗದೆ ಸಿಬ್ಬಂದಿ ತಡಬಡಾಯಿಸಿದರು. ಬೆಳಗ್ಗೆ 11 ಗಂಟೆಯಾದರೂ ಕೆಲವು ಕಚೇರಿಗಳ ಬೀಗ ತೆಗೆಯದಿರುವುದನ್ನು ಕಂಡು ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















