ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಸೋಂಕು ಬಾಧಿಸುತ್ತಾ, ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದರ ಉತ್ಪಾದನೆ ಹಾಗೂ ಪೂರೈಕೆಗೆ ಬಹಳಷ್ಟು ಒತ್ತು ನೀಡಲಾಗುತ್ತಿದೆ.
ಸಮಾಜದ ಯಾವುದೇ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸುವ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಈಗಲೂ ಸಹ ಅಂತಹುದ್ದೇ ಸಹಾಯ ಹಸ್ತ ಚಾಚಿದೆ.
ರಾಜ್ಯದ ಬಹಳಷ್ಟು ಕಡೆಯಿರುವಂತೆ ಶಿವಮೊಗ್ಗದಲ್ಲೂ ಸಹ ಆಕ್ಸಿಜನ್’ಗೆ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ವಿಚಾರ ತಿಳಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು, ಜಿಲ್ಲೆಗೆ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ.
ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನನ್ನು ಅವರು ಉಚಿತವಾಗಿ ನೀಡಿದ್ದು, ಇದು ನಿನ್ನೆ ರಾತ್ರಿ ಆಸ್ಪತ್ರೆಗೆ ತಲುಪಿದೆ.
ಸಮಾಜಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿರುವ ವೀರೇಂದ್ರ ಹೆಗ್ಗಡೆಯವರ ಈ ಸಹಾಯಕ್ಕೆ ಜಿಲ್ಲೆಯ ಜನರು ಕೃತಜ್ಞತೆ ಅರ್ಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post