ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ #Thirthahalli ತಾಲೂಕಿನ ಬೆಜ್ಜವಳ್ಳಿ ಸಮೀಪದ ಸಮಕಾನಿಯಲ್ಲಿ ಪಾಲಕರು ಬೈದರು ಎಂಬ ಕಾರಣಕ್ಕೆ 10 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೂಲಿ ಕಾರ್ಮಿಕ ಸ್ವಾಮಿ ಅವರ ಮಗ, ಮೂರನೇ ತರಗತಿ ವಿದ್ಯಾರ್ಥಿ ಪ್ರೀತಂ ಮೃತ ಬಾಲಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾನೆ.
ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















