ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಳೆ ವಿಮೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಗೆ ಸುಮಾರು 435 ಕೋಟಿ ರೂ. ಬಿಡುಗಡೆಯಾಗಲಿದ್ದು, 50,380 ರೈತರಿಗೆ ಎಕರೆಗೆ 25 ಸಾವಿರ ರೂ.ಗಳಾದರೂ ವಿಮೆ ಪರಿಹಾರ ಸಿಗಲಿದೆ ಎಂದು ಸಂಸದ ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
2023-24ರ ಬೆಳೆ ವಿಮೆಗಾಗಿ ಜಿಲ್ಲೆಯಲ್ಲಿ ಸುಮಾರು 50383 ರೈತರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿಗೆ ಇದರ ಜವಾಬ್ದಾರಿ ನೀಡಲಾಗಿತತು. ಕಳೆದ ವರ್ಷ ಬರಗಾಲ ಬಂದಿತ್ತು. ಸುಮಾರು 87 ಸಾವಿರ ಎಕರೆ ಜಮೀನಿನಲ್ಲಿ ಬೆಳೆಯೇ ಇರಲಿಲ್ಲ. 445 ಕೋಟಿ ರೂ. ಪರಿಹಾರ ನೀಡಬೇಕಿತ್ತು. ಇದರಲ್ಲಿ ರೈತರು ಸುಮಾರು 22.50 ಕೋಟಿ ರೂ. ವಿಮೆ ಕಟ್ಟಿದ್ದಾರೆ ಎಂದು ತಿಳಿಸಿದರು.
Also read: ಬೇಕಾಬಿಟ್ಟಿ ಆಸ್ತಿ ಕಬಳಿಸಲು ರಾಜ್ಯ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಸಂಸದ ರಾಘವೇಂದ್ರ ವಾಗ್ದಾಳಿ
ಜಿಲ್ಲೆಯಲ್ಲಿ ಅಡಿಕೆ ಬೆಳೆಯೇ ಹೆಚ್ಚು ನಷ್ಟ ಉಂಟಾಗಿದೆ. ಇದರ ಜೊತೆಗೆ ಶುಂಠಿ, ಮಾವು ಮೆಣಸು ಕೂಡ ಸೇರಿದೆ. ಆದರೆ, ಸುಮಾರು 48619 ಅಡಿಕೆ ಬೆಳೆಗಾರರು ವಿಮೆಗಾಗಿ ಅರ್ಜಿ ಹಾಕಿದ್ದಾರೆ. ಸುಮಾರು 84 ಸಾವಿರ ಎಕರೆ ಪ್ರದೇಶದಲ್ಲಿ ಅಡಕೆ ಬೆಳೆ ನಷ್ಟವಾಗಿದೆ. 445 ಕೋಟಿ ರೂ.ಗಳಲ್ಲಿ 435 ಕೋಟಿ ರೂ. ಅಡಿಕೆ ಬೆಳೆಗೆ ಪರಿಹಾರ ಸಿಗಲಿದೆ. ಇನ್ನು 8-10 ದಿನಗಳಲ್ಲಿ ರೈತರ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಮಾಹಿತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post