ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಘಟನೆಯನ್ನು ಸಿಬಿಐಗೆ ಒಪ್ಪಿಸಬೇಕು, ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಮತ್ತು ಮೃತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಷ್ಟ್ರಭಕ್ತ ಬಳಗದ ಕೆ.ಎಸ್. ಈಶ್ವರಪ್ಪ #K S Eshwarappa ಒತ್ತಾಯಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಧಿಕಾರಿ ಚಂದ್ರಶೇಖರ್ ಅವರು ಒಬ್ಬ ಪ್ರಾಮಾಣಿಕರು ಆಗಿದ್ದರು. ರಾಜ್ಯ ಸರ್ಕಾರದ ಭ್ರಷ್ಟಚಾರವನ್ನು ಬಯಲಿಗೆಳೆಯಲು ತಮ್ಮ ಪ್ರಾಣವನ್ನೇ ನೀಡಿದ್ದಾರೆ. ಒಬ್ಬ ಅಧಿಕಾರಿ ಹೀಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಅತ್ಯಂತ ದುದೈರ್ವ ಸಂಗತಿಯಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post