No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂದಿನ ಎರಡು ವರ್ಷದಲ್ಲಿ 500-600 ಕೆಪಿಎಸ್ ಮಾದರಿ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2023
in ಶಿವಮೊಗ್ಗ
0
ಮುಂದಿನ ಎರಡು ವರ್ಷದಲ್ಲಿ 500-600 ಕೆಪಿಎಸ್ ಮಾದರಿ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್. ಬಂಗಾರಪ್ಪ Minister Madhu Bangarappa ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಶಿಕ್ಷಕರ ಸಂಘ ಹಾಗೂ ಸೊರಬದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಡಾ.ರಾಜ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಂತೆಯೇ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ಈ ಶಾಲೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸಕ್ತ ಮಕ್ಕಳನ್ನು ದಾಖಲು ಮಾಡಿಕೊಂಡು ತರಗತಿಗಳಿಗೆ ಕರೆತರುವ ಹಾಗೂ ತರಗತಿ ಮುಗಿದ ನಂತರ ಬಿಟ್ಟು ಬರಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಸ್ಥಳೀಯರ ಸಹಕಾರವನ್ನು ಪಡೆಯಲಾಗುವುದು ಎಂದರು.

ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರ ಲು ವಿನೂತನ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಈ ವಿಶೇಷ ಪ್ರಯತ್ನದ ಫಲವಾಗಿ ದ್ವಿತೀಯ ಪಿಯುಸಿ ಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2 ನೇ ಬಾರಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಿದ ಪರಿಣಾಮವಾಗಿ ಪರೀಕ್ಷೆಗೆ ಹಾಜರಾದ ಸುಮಾರು 119000 ಮಕ್ಕಳ ಪೈಕಿ 41000 ಮಕ್ಕಳು ಉತ್ತೀರ್ಣರಾಗಿ ಶಿಕ್ಷಣದ ಮುಖ್ಯವಾಹಿನಿಗೆ ಬರುವಂತೆ ಆಗಿದೆ ಎಂದರು.

ಈ ರೀತಿ ಅವಕಾಶ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಶಾಲಾ ದಾಖಲಾತಿಗೆ ಸೂಚಿಸಲಾಗಿದೆ ಅಲ್ಲದೆ ಈಗಾಗಲೇ ಪೂರ್ಣಗೊಂಡ ಪಾಠಗಳ ಪುನರಾವರ್ತನೆ ಮಾಡಲು ಸೂಚಿಸಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಸುಮಾರು 30000ಕ್ಕೂ ಹೆಚ್ಚಿನ ಶಿಕ್ಷಕರ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಇತಿಹಾಸ ಎನಿಸಿದೆ ಎಂದರು.

Also read: ಸೆ.19ರಂದು ಗಣೇಶ ಚತುರ್ಥಿಗೆ ಸಾರ್ವತ್ರಿಕ ರಜೆ ಘೋಷಿಸಿ: ವಿಹಿಂಪ ಆಗ್ರಹ

ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು 43000 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಕಾನೂನು ತೊಡಕಿನಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿಗೆ ನ್ಯಾಯಾಲಯದ ಆದೇಶ ಹೊರ ಬರುತ್ತಿದ್ದಂತೆ ಆಯ್ಕೆ ಆದ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲಾಗುವುದು. ಆಯ್ಕೆಯಾದ ಶಿಕ್ಷಕರು ತಾಳ್ಮೆಯಿಂದ ಇರುವಂತೆ ಮನವಿ ಮಾಡಿದರು.

ಈಗಾಗಲೇ ನೇಮಕಗೊಂಡ ಶಿಕ್ಷಕರು ಪ್ರತಿಭಾವಂತರೇ ಆಗಿರುವುದು ವಿಶೇಷ. ಊರಿಗೆ ಒಂದು ಶಾಲೆ ತೆರೆದರೇ ಅದುವೇ ಅಭಿವೃದ್ಧಿ ಎನ್ನುವ ಕಾಲ ಇತ್ತು. ಪ್ರಸ್ತುತ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಉತ್ಸುಕರಾಗಿದ್ದಾರೆ. ಖಾಸಗಿ ಶಾಲೆಗಳ ಕಾರಣದಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಕಣ್ಣೆದುರು ಇರುವ ಪ್ರಮುಖ ಕಾರ್ಯವಾಗಿದೆ ಎಂದರು.
ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಪೋಷಕರು ಮಕ್ಕಳನ್ನು ತಮ್ಮ ಮಡಿಲಿಗೆ ಹಾಕಿದ್ದಾರೆ. ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಭಾರತಿಶೆಟ್ಟಿ ಅವರು ಮಾತನಾಡಿ, ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದರೂ ತಮಗೆ ಗುರಿ ತೋರಿಸಿದ ಶಿಕ್ಷಕರನ್ನು ಮರೆಯಲಾರರು. ಶಿಕ್ಷಕರು ಶ್ರೀಕೃಷ್ಣ ನಂತೆ ಮಾರ್ಗದರ್ಶಕ ಹಾಗೂ ಕರ್ಣನಂತಹ ಗೆಳೆಯ ಆಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಡಯಟ್ ಪ್ರಾಂಶುಪಾಲ ಬಸವರಾಜಪ್ಪ ಬಿ.ಇ.ಓ. ಸತ್ಯನಾರಾಯಣ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಲಾಯಿತು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ಸೆ.19ರಂದು ಗಣೇಶ ಚತುರ್ಥಿಗೆ ಸಾರ್ವತ್ರಿಕ ರಜೆ ಘೋಷಿಸಿ: ವಿಹಿಂಪ ಆಗ್ರಹ

Next Post

ಬರಪೀಡಿತ ಜಿಲ್ಲೆಯಾಗಿ ಶಿವಮೊಗ್ಗ ಘೋಷಣೆ: ಎಷ್ಟು ತಿಂಗಳು ಅನಾವೃಷ್ಠಿ ಪರಿಗಣನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬರಪೀಡಿತ ಜಿಲ್ಲೆಯಾಗಿ ಶಿವಮೊಗ್ಗ ಘೋಷಣೆ: ಎಷ್ಟು ತಿಂಗಳು ಅನಾವೃಷ್ಠಿ ಪರಿಗಣನೆ

ಬರಪೀಡಿತ ಜಿಲ್ಲೆಯಾಗಿ ಶಿವಮೊಗ್ಗ ಘೋಷಣೆ: ಎಷ್ಟು ತಿಂಗಳು ಅನಾವೃಷ್ಠಿ ಪರಿಗಣನೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL