ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ರತ್ನ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನಾಚರಣೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಸಿಂಗ್, ಜಿಪಂ ಸಿಇಓ ಎನ್.ಡಿ. ಪ್ರಕಾಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಆಮ್ಟೆ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಸಾರ್ವಜನಿಕರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Also read: ಸೊರಬದಲ್ಲಿ ಕೋಟ್ಯಂತರ ರೂ. ಅನುದಾನದ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















