ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ Suicide by hanging ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭ ಕೃತ್ಯ ನಡೆದಿದೆ ಎನ್ನಲಾಗಿದೆ. ಸಂಜೆ ಪೋಷಕರು ಮನೆಗೆ ಮರಳಿದಾಗ ಬಾಲಕಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















