ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ರಾಜ್ಯಕ್ಕೆ ಪ್ರಥಮ ರ್ಯಾಂಕ್ ತಂದು ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಪ್ರೌಢಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ #Madhu Bangarappa ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು ಚಾಲೆಂಜಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಅನೇಕ ಬದಲಾವಣೆಯಾಗಿದೆ. ಪೌಷ್ಠಿಕ ಆಹಾರ ನೀಡುತ್ತಿದ್ದೇವೆ. ಪಠ್ಯಗಳ ಬದಲಾವಣೆಯಾಗಿದೆ. ಶಿಕ್ಷಕರ ನೇಮಕಾತಿಯಾಗಿದೆ, ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ. ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಕೊಟ್ಟಿದ್ದೇವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಕಡಿಮೆ ಅಂಕಗಳಿಸಿದ ಮತ್ತು ಅನುರ್ತೀಣರಾದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಇನ್ನೆರಡು ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ ಎಂದರು.
Also read: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ | ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | ಕಾರಣವೇನು?
ಶೇ.20 ಗ್ರಾಮೀಣ ಕೃಪಾಂಕ ನೀಡಿದ್ದೇವೆ. ಇವೆಲ್ಲವುದರ ಪರಿಣಾಮ ಉತ್ತಮ ಫಲಿತಾಂಶ ಬಂದಿದೆ. ಪರೀಕ್ಷೆಯನ್ನು ಬಿಗಿಯಾಗಿ ಪಾರದರ್ಶಕವಾಗಿ ನಡೆಸಿದ್ದರಿಂದ ರಾಜ್ಯದಲ್ಲಿ 75 ಶಾಲೆಗಳು ಶೂನ್ಯ ಫಲಿತಾಂಶ ಬಂದಿದ್ದರು ಸಹ, ಇನ್ನೆರಡು ಅವಕಾಶ ಕಲ್ಪಿಸಿದ್ದೇವೆ. ಈಗ ಬಿಗಿ ಮಾಡಿದ್ದರ ಪರಿಣಾಮ ಮುಂದಿನ ಉನ್ನತ ಶಿಕ್ಷಣಕ್ಕೆ ಅವರ ಭವಿಷ್ಯ ಉಜ್ವಾಲವಾಗಲಿದೆ. ಅನೇಕ ಪೋಷಕರು ಪರೀಕ್ಷೆಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಬಾರಿ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಈ ಬಾರಿ 7 ಸಾವಿರ ಕೋಟಿ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಿದ್ದಾರೆ. ಶಾಲೆಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಹಂತ ಹಂತವಾಗಿ ಹಣಬಿಡುಗಡೆ ಮಾಡಲಾಗುತ್ತಿದೆ. 3 ವರ್ಷದಲ್ಲಿ 3 ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ಮಾಡಿ ಮೇಲ್ದರ್ಜೆಗೆ ಏರಿಸುತ್ತೇವೆ. ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಬಡ್ತಿ ಪಡೆದಿರುವುದು ಸಂತೋಷ ತಂದಿದೆ. ಶಿಕ್ಷಣ ಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಅನೇಕರು ನನ್ನ ಬಗ್ಗೆ ಕೆಟ್ಟದಾಗಿ ಟ್ರೋಲ್ ಮಾಡುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿ ಸಮಯ ವ್ಯರ್ಥ ಮಾಡುವುದಿಲ್ಲ, ಟ್ರೋಲ್ ಮಾಡುವವರು ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಜಿತೇಂದ್ರ, ಶಮಂತ್, ಪದ್ಮನಾಭ್, ಶಿ.ಜು.ಪಾಶ, ಜಿ.ಡಿ. ಮಂಜುನಾಥ್, ಅನ್ನೀಸ್ ಇದ್ದರು.
ಸುದ್ಧಿಗೋಷ್ಠಿಗೂ ಮುನ್ನ ಸಚಿವರು ರಾಜ್ಯದ ಎಸ್‍ಎಸ್‍ಎಲ್‍ಸಿ ಟಾಪರ್ ಅಂಕಿತ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಶುಭಾಷಯ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















