ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರ ಬೆಳಿಗ್ಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬೆಳಿಗ್ಗೆ 9 ಗಂಟೆಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಗೃಹ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಬಿ.ಎಸ್.ಯಡಿಯೂರಪ್ಪನವರ ಗೌರವ ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಅಧ್ಯಕ್ಷರು, ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರು, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು, ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಪಾಲ್ಗೊಳ್ಳುವರು. ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಇತರೆ ಅಧಿಕಾರಿಗಳು ಪಾಲ್ಗೊಳ್ಳುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post