No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಾತಂತ್ರ್ಯದ ಬೆಲೆ ಅರಿತು ದೇಶದ ಭವಿಷ್ಯ ಕಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ : ಬಿ.ವೈ. ಅರುಣಾದೇವಿ

ಪಿಇಎಸ್ ಟ್ರಸ್ಟ್ ವತಿಯಿಂದ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

kalpa News by kalpa News
August 15, 2026
in ಶಿವಮೊಗ್ಗ
0
Shivamogga 80th Independence day in PES public School
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸ್ವಾತಂತ್ರ್ಯ ನಮಗೆ ದೊರೆತ ಉಡುಗೊರೆಯಲ್ಲ; ಅಸಂಖ್ಯಾತ ಹೋರಾಟಗಾರರ ತ್ಯಾಗದ ಫಲವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ದೇಶದ ಭವಿಷ್ಯವನ್ನು ಕಟ್ಟುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು (Shivamogga) ಶಿವಮೊಗ್ಗ ದ ಪಿಇಎಸ್ ಟ್ರಸ್ಟ್ (PES Trust) ಟ್ರಸ್ಟಿ ಹಾಗೂ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಿ.ವೈ. ಅರುಣಾ ದೇವಿ ಹೇಳಿದರು.

ಪಿಇಎಸ್ ಟ್ರಸ್ಟ್ ವತಿಯಿಂದ ನಗರದ ಪಿಇಎಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ತ್ರಿವರ್ಣ ಧ್ವಜ ಹಾರುವ ಪ್ರತಿಕ್ಷಣವೂ ದೇಶಕ್ಕಾಗಿ ಹೋರಾಡಿದ ವೀರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುತ್ತದೆ. ಸ್ವಾತಂತ್ರ್ಯ ನಮಗೆ ದೊರೆತ ಉಡುಗೊರೆಯಲ್ಲ; ಅಸಂಖ್ಯಾತ ಹೋರಾಟಗಾರರ ತ್ಯಾಗದ ಫಲವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ದೇಶದ ಭವಿಷ್ಯವನ್ನು ಕಟ್ಟುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

https://kalpa.news/wp-content/uploads/2026/08/Independence-Day-Film-Kannada.mp4

ಪಿಇಎಸ್‌ ಪಬ್ಲಿಕ್‌ ಶಾಲೆಯ ಆವರಣವು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧಕರನ್ನು ಹಾಗೂ ವಿವಿಧ ಕ್ಷೇತ್ರಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶಪ್ರೇಮ, ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರೀಯ ಏಕತೆಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಷ್ಟ್ರೀಯ ಏಕತೆಗೆ ಕರೆ

“ನಮ್ಮ ದೇಶಕ್ಕೆ ಸ್ವಾತಂತ್ರ್ಯವು ಚಿನ್ನದ ತಟ್ಟೆಯಲ್ಲಿ ದೊರೆತದ್ದಲ್ಲ. ನೂರಾರು ಹೋರಾಟಗಾರರ ಹೋರಾಟ, ತ್ಯಾಗ ಮತ್ತು ಬಲಿದಾನದ ಪ್ರತಿಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಧರ್ಮ, ಜಾತಿ, ಭಾಷೆ ಹಾಗೂ ಪ್ರದೇಶಗಳ ಭೇದವಿಲ್ಲದೆ ನಾವೆಲ್ಲರೂ ಒಗ್ಗೂಡಿ ರಾಷ್ಟ್ರೀಯ ಏಕತೆಯನ್ನು ಸಾರಬೇಕು,” ಎಂದು ಶ್ರೀಮತಿ ಅರುಣಾ ದೇವಿ ಎಸ್. ವೈ. ಅವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮನದಟ್ಟು ಮಾಡಿದರು.

Also read>> ಸ್ವರಾಜ್ಯದ ಆಶಯ ಯುವಮನಗಳಲ್ಲಿ ಮೊಳಗಲಿ: NES ಕಾರ್ಯದರ್ಶಿ ನಾಗರಾಜ

ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2025-26ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 30 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಗೆ ಪಾರಿತೋಷಕ, ಅಭಿನಂದನಾ ಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶ್ರೀಮತಿ ಅರುಣಾ ದೇವಿ ಎಸ್. ವೈ. ಅವರು, ಶಿಕ್ಷಣದಲ್ಲಿ ಸಾಧಿಸಿರುವ ಯಶಸ್ಸನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಿಕೊಂಡು ಜೀವನದ ವಿವಿಧ ಕ್ಷೇತ್ರಗಳಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸಿದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಯಕ್ರಮದ ಅಂಗವಾಗಿ ಪಿಇಎಸ್‌ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಿಇಎಸ್‌ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಗೀತೆಗಳು ಹಾಗೂ ನೃತ್ಯಗಳನ್ನು ಪ್ರಸ್ತುತಪಡಿಸಿ ನೆರೆದಿದ್ದವರ ಗಮನ ಸೆಳೆದರು.

ಪಿಇಎಸ್‌ ಪಿಯುಸಿ, ಐಟಿಎಂ, ಐಎಎಂಎಸ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳ ವಿದ್ಯಾರ್ಥಿಗಳೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಬಿಂಬಿಸುವ ಕಾರ್ಯಕ್ರಮಗಳು ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಪಿಇಎಸ್‌ ಸಮೂಹ ಸಂಸ್ಥೆಯ ಕುಲಸಚಿವರಾದ ಡಾ. ನಾಗರಾಜ್ ಆರ್., ವಿವಿಧ ವಿಭಾಗಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.PES Shivamogga

ಧ್ವಜಾರೋಹಣ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಸೆಂಧಿಲ್ ಹಾಗೂ ದೈಹಿಕ ಶಿಕ್ಷಕರಾದ ಸಂದೀಪ್ ಕುಮಾರ್, ಕಿರಣ್ ಕುಮಾರ್, ಸಂಜಯ್ ಮತ್ತು ಶ್ರೀಮತಿ ಶ್ರೀರಂಜಿನಿ ಅವರು ಸಂಯೋಜಿಸಿದರು.

ಕುಮಾರಿ ಸಿರಿ ಪಿ.ಆರ್. ಮತ್ತು ಕುಮಾರಿ ಅಭಿಜ್ಞಾನ ಅವರು ಸ್ವಾಗತಿಸಿದರು. ಕುಮಾರಿ ಸಾಹಿತ್ಯ ಪ್ರಸಾದ್ ಹಾಗೂ ಸಾನ್ವಿ ಆರ್. ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಚಿನ್ಮಯಿ ಎನ್. ಅವರು ವಂದಿಸಿದರು.

ಒಟ್ಟಾರೆ, ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ವಿದ್ಯಾರ್ಥಿಗಳ ಸಾಧನೆಯನ್ನು ಸಂಭ್ರಮಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: 80th Independence dayB Y ArunadeviPES Public SchoolShivamoggaಶಿವಮೊಗ್ಗ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವರಾಜ್ಯದ ಆಶಯ ಯುವಮನಗಳಲ್ಲಿ ಮೊಳಗಲಿ: NES ಕಾರ್ಯದರ್ಶಿ ನಾಗರಾಜ

Next Post

ಜೈನ್ ಪಬ್ಲಿಕ್ ಶಾಲೆಯಲ್ಲಿ ಭವ್ಯ ಸ್ವಾತಂತ್ರ್ಯೋತ್ಸವ: ದೇಶಪ್ರೇಮ, ಶಿಸ್ತು ಮತ್ತು ಸೇವಾಭಾವಕ್ಕೆ ಕರೆ

kalpa News

kalpa News

Next Post
Shivamogga Independence Day In Jain Public School

ಜೈನ್ ಪಬ್ಲಿಕ್ ಶಾಲೆಯಲ್ಲಿ ಭವ್ಯ ಸ್ವಾತಂತ್ರ್ಯೋತ್ಸವ: ದೇಶಪ್ರೇಮ, ಶಿಸ್ತು ಮತ್ತು ಸೇವಾಭಾವಕ್ಕೆ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL