ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸಂಯುಕ್ತಾಶ್ರಯದಲ್ಲಿ ಜ.14ರಂದು ನಗರದ ಕುವೆಂಪು ರಂಗ ಮಂದಿರದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್. ರವಿಕುಮಾರ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರು ಭೋವಿ ಸಮಾಜದ ಕುಲ ಗುರುಗಳು.. ವಿಶೇಷವಾಗಿ 13ನೇ ಶತಮಾನದಲ್ಲಿ ನಡೆದ ವಚನ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅನುಭವ ಮಂಟಪದ ಮೂರನೇ ಪೀಠಾಧ್ಯಕ್ಷರು. ಕೆರೆಗಳನ್ನು ಕಟ್ಡುವ ಮೂಲಕ ಕಾಯಕ ಯೋಗಿ ಎಂದೇ ಹೆಸರಾದವರು. ಈ ಹಿನ್ನಲೆಯಲ್ಲಿ ಸಿದ್ದರಾಮೇಶ್ವರರ ಜಯಂತಿಯನ್ನು ಜಿಲ್ಲಾಡಳಿತಕ್ಕೆ ಜಿಲ್ಲಾ ಭೋವಿ ಸಮಾಜವೂ ಕೂಡ ಸಹಕಾರ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಜ.14ರಂದು ಬೆಳಗ್ಗೆ 11 ಗಂಟೆಗೆ ನಗರ ಕುವೆಂಪು ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ಗೋಪಾಲ ಕೃಷ್ಡ ಬೇಳೂರು, ಬಿ.ಕೆ.ಸಂಗಮೇಶ್ವರ್, ಶ್ರೀಮತಿ ಶಾರದಾ ಪೂರ್ಯಾನಾಯ್ಕ ಸೇರಿದಂತೆ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಭೋವಿ ಸಮಾಜದ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಡಿ, ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್ ಪಾಲ್ಗೊಳ್ಳುತ್ತಿದ್ದಾರೆ. ಹಿರಿಯ ಪತ್ರಕರ್ತರಾದ ದೇಶಾದ್ರಿ ಹೊಸ್ಮನೆ ಅವರು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮಕ್ಕೆ ಭೋವಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಹಿನ್ನಲೆಯಲ್ಲಿ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ನಡೆಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಶಿವಮೊಗ್ಗದಲ್ಲಿ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ, ಆರಂಭವಾಗಿ ಸುಮಾರು 50 ವರ್ಷಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಸಂಫದ ಸುವರ್ಣ ಮುಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿಗಳು ನಡೆದಿವೆ. ಇದರ ಪೂರ್ವಭಾವಿಯ ಹಿನ್ನಲೆಯಲ್ಲಿ ಸಮಾಜದ ಜನರು ಸಿದ್ಧರಾಮೇಶ್ವರ ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ಧೀರರಾಜ್ ಹೊನ್ನವಿಲೆ, ವೀರಭದ್ರಪ್ಪ ಪೂಜಾರಿ, ತಿಮ್ಮರಾಜು, ಕೃಷ್ಣಪ್ಪ, ನವುಲೆ ರಮೇಶ್, ವೀರೇಶ್ ಕ್ಯಾತಿನಕೊಪ್ಪ, ಲೋಕೇಶ್ ಹೊಂಗಿರಣ, ಬೂದಿಗೆರೆ ಬಸವರಾಜ್, ಸಮಾಜದ ಮುಖಂಡ ದೇವಿಕುಮಾರ್, ತಾಲ್ಲೂಕು ಅಧ್ಯಕ್ಷ ಬಿ. ಜಗದೀಶ್, ನಗರಾಧ್ಯಕ್ಷ ಹರೀಶ್, ಗಿರೀಶ್ ಹಾಗೂ ಯತೀಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















