ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
30 ವರ್ಷದ ಯುವಕನೊಬ್ಬನು 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ನ್ಯಾಯಾಲಯ ಆತನಿಗೆ 20 ವರ್ಷ ಕಠಿಣ ಶಿಕ್ಷೆ Severe punishment ನೀಡಿ ಆದೇಶಿಸಿದೆ.
ಶಿವಮೊಗ್ಗ ತಾಲೂಕಿನಲ್ಲಿ 2022ನೇ ಸಾಲಿನಲ್ಲಿ, 17 ವರ್ಷದ ನೊಂದ ಬಾಲಕಿ ಒಬ್ಬರಿಗೆ, 30 ವರ್ಷದ ಯುವಕನೊಬ್ಬನು ಲೈಂಗಿಕ ದೌರ್ಜನ್ಯ ನಡೆಸಿದ್ದರಿಂದ ಆಕೆಯು ಗರ್ಭಿಣಿಯಾಗಿರುತ್ತಾಳೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ POCSO Act ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಪಿಐ ತಿಪ್ಪೆಸ್ವಾಮಿ ಎಂ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ, ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಅಭಿಯೋಜಕ ಶ್ರೀಧರ್ ಸರ್ಕಾರಿ ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ರವರು ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 2,00,000 ರೂದಂಡವನ್ನು ವಿಧಿಸಿ ಹಾಗೂ ನೊಂದ ಬಾಲಕಿಗೆ 1,80,000 ರೂ.ಪರಿಹಾರವನ್ನು ನೀಡಲು ಆದೇಶಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















