ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮೌಲ್ಯಾಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಬಹಳ ಪ್ರಮುಖವಾಗಿದ್ದು. ಅಂತಹ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಮಂಜುನಾಥ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಅಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಹಾಗೂ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಜೀವನ ಕೌಶಲ್ಯ ಕಲಿಸುವುದರಿಂದ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿಮಾರ್ಣವಾಗತ್ತದೆ ಎಂದರು.
ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಅರಿತುಕೊಳ್ಳಬೇಕು, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Also read: ಉಕ್ಕಿ ಹರಿಯುತ್ತಿರುವ ತುಂಗಾ ನದಿ: ಶಿವಮೊಗ್ಗದಲ್ಲಿ ಮುಳುಗಿದ ಮಂಟಪ
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಮೂಲಕ ಗೌರವಿಸಲಾಯಿತು.
ಜೆ.ಪಿ.ಎನ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕೆ. ಕೆಂಚಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಂಗಪ್ಪ, ಜೆಪಿಎನ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ದಯಾನಂದ ನಾಯ್ಕ್, ಉಪನ್ಯಾಸಕ ವೃಂದ, ಬೋಧಕೇತರ ವರ್ಗ, ವಿದ್ಯಾರ್ಥಿ ವೃಂದ ಮತ್ತಿತರರು ಭಾಗವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















