ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಶಂಕರಮಠ ವೃತ್ತ ಬಳಿಯಲ್ಲಿ ನಿಂತಿದ್ದ ಆಟೋಗೆ ಇಟ್ಟಿಗೆ ತುಂಬಿದ್ದ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ವೇಳೆಗೆ ಘಟನೆ ನಡೆದಿದ್ದು, ಶಂಕರಮಠ ವೃತ್ತದ ರಸ್ತೆ ಬದಿಯಲ್ಲಿ ಆಟೋ ನಿಲ್ಲಿಸಿಕೊಂಡು ಚಾಲಕ ಕುಳಿತಿದ್ದ ಈ ವೇಳೆ ಇಟ್ಟಿಗೆ ತುಂಬಿದ್ದ ಬೊಲೆರೋ ವಾಹನವೊಂದು ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋ ನುಜ್ಜಗುಜ್ಜಾಗಿದೆ. ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















