ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಡಬ್ಲೂಎಚ್, ಪ್ರಮಾಣ ಪತ್ರ ನೀಡುವಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಸಹಕರಿಸಿದ ಗಣ್ಯರಿಗೆ ಶಿವಮೊಗ್ಗ ಜಿಲ್ಲಾ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಒಕ್ಕೂಟದ ವತಿಯಿಂದ ಅ.2ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ದೇವದಾಸ್ ನಾಯಕ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗೌಡ ಸಾರಸ್ವತ ಸಮಾಜದ ಮಂದಿರದಲ್ಲಿ ಸಂಜೆ 5ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್. ಈಶ್ವರಪ್ಪ, ಗೃಹಮಂತ್ರಿ ಅರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಶಿವಮೊಗ್ಗ ಮಹಾನಗರ ಪಾಲಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಅವರನ್ನು ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಗೌಡ ಸಾರಸ್ವತ ಸಮಾಜವನ್ನು ಪ್ರತಿನಿಧಿಸುವ ಸರ್ಕಾರದ ವಿವಿಧ ಹುದ್ದೆಗಳಲ್ಲಿರುವ ಸಮಾಜ ಬಾಂಧವರನ್ನು ಸನ್ಮಾನಿಸಲಾಗುವುದು ಹಾಗೂ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರಿಕ್ಷೆಯಲ್ಲಿ ಅತಿ ಹೆಚ್ಚಿನ ಅಂಕವನ್ನು ಪಡೆದಿರುವ (೬೨೦-೬೨೫) ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.
ಈ ಸಂದರ್ಭದಲ್ಲಿ ಶ್ರೀನಿವಾಸ ಕಾಮತ್, ಕಾರ್ಯದರ್ಶಿಗಳಾದ ಎನ್. ಮನೋಹರ್ ಕಾಮತ್, ರಾಜೇಂದ್ರ ಪೈ, ರತ್ನಾಕರ ಶೆಣೈ, ಭಾಸ್ಕರ್ ಕಾಮತ್, ರಮೇಶ್ ಹೆಗ್ಡೆ, ರಮಾನಂದ ನಾಯಕ, ಸದಾನಂದ ನಾಯಕ, ವೆಂಕಟೇಶ್ ನಾಯಕ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post