ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಜೋಡಿಯನ್ನು ಸಂಚಾರ ಠಾಣೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ರಾಜು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗದ ತುಂಗಾ ನದಿ ಹಳೆ ಸೇತುವೆ ಬಳಿ ಘಟನೆ ಸಂಭವಿಸಿದೆ. ರಾಜು ಎಂಬಾತ ಯುವತಿ ಜೊತೆಗೆ ಸೇತುವೆ ಬಳಿ ಬಂದಿದ್ದಾನೆ. ಇಬ್ಬರು ಸೇತುವೆಯಿಂದ ತುಂಗಾ ಹೊಳೆಗೆ ಜಿಗಿಯಲು ಮುಂದಾಗಿದ್ದಾರೆ. ಈ ವೇಳೆ ಯುವಕ ಹೊಳೆಗೆ ಹಾರಿದ್ದಾನೆ. ಯುವತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.












Discussion about this post