ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರೈಲ್ವೆ ಹಳಿಯ ಪಕ್ಕದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗಿನ ಜಾವ 4-5 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಕೃಷಿನಗರಕ್ಕೆ ಹೋಗುವ ದಾರಿಯಲ್ಲಿ 42-45 ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ರೈಲಿಗೆ ಸಿಲುಕಿ ಮಹಿಳೆ ಸಾವು ಕಂಡಿರುವ ಬಗ್ಗೆ ರೈಲ್ವೆ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Discussion about this post