No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರಜಿತ್ ಸಿಂಗ್ ಪಾಬ್ಲಾ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2025
in ಶಿವಮೊಗ್ಗ
0
ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದು ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪ್ರತಿಯೊಬ್ಬ ವಿದ್ಯಾರ್ಥಿಗೆ ಕೇವಲ ಪದವಿ ಪ್ರಶಸ್ತಿ ಪತ್ರಗಳು ಸಾಕಾಗುವುದಿಲ್ಲ, ವಿದ್ಯಾರ್ಥಿಯೊಬ್ಬನಲ್ಲ್ರಿರುವ ಔದ್ಯೋಗಿಕ ಕೌಶಲ್ಯಗಳಿಗೂ ಅಷ್ಟೇ ಪ್ರಾಶಸ್ತ್ಯವನ್ನು ನೀಡಲಾಗುತ್ತಿದೆ. ಇದಕ್ಕಾಗಿಯೇ ವಿದ್ಯಾರ್ಥಿಯು ತನ್ನ ಪದವಿ ಅಧ್ಯಯನದ ಸಂದರ್ಭದಲ್ಲಿಯೇ ಕೌಶಲ್ಯ ಅಭಿವೃದ್ಧಿಯ ಡಿಪ್ಲೋಮಾ ಅಥವಾ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಮಾಡಿಕೊಳ್ಳುವ ಅನಿವಾರ್ಯತೆ ಇದೆ ಎಂದು ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಧ್ಯಕ್ಷರಾದ ಬ್ರಿಗೇಡಿಯರ್ ಡಾ. ಸುರಜಿತ್ ಸಿಂಗ್ ಪಾಬ್ಲಾ ಹೇಳಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ನಡೆಸಲಾಗುವ ಟ್ಯಾಲಿ ಹಾಗೂ ಐಟಿ ಕೋರ್ಸುಗಳನ್ನು ಉದ್ಘಾಟಿಸಿ ಅವರು ಮಾತನಾಡಿ, ಕಟೀಲು ಅಶೋಕ ಪೈ ಸ್ಮಾರಕ ಕಾಲೇಜು ಒಂದು ಬಹಳ ಮುಖ್ಯವಾದ ಹೆಜ್ಜೆಯನ್ನು ಇಟ್ಟಿದೆ ಎಂದು ಶ್ಲಾಘಿಸಿದರು.
ಔದ್ಯೋಗಿಕ ಕ್ಷೇತ್ರಗಳ ಅವಶ್ಯಕತೆ ಹಾಗೂ ಪದವಿ ಪಠ್ಯಕ್ರಮದ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿ ಉದ್ಯೋಗಕ್ಕೆ ತಕ್ಕ ಜ್ಞಾನ ಹಾಗೂ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಇಂದು ವಿದ್ಯಾರ್ಥಿಗಳಿಗೆ ಬಹಳ ಅವಕಾಶಗಳಿವೆ. ಇದನ್ನೆಲ್ಲ ಮನಗಂಡು ಮಣಿಪಾಲ ಶಿಕ್ಷಣ ಸಂಸ್ಥೆಯ ಮೂಲಕ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸಿ ಒಂದು ವಿಶ್ವವಿದ್ಯಾಲಯ ಮಟ್ಟದ ವಿವಿಧ ಕೌಶಲ್ಯ ಅಭಿವೃದ್ಧಿ ಕೋರ್ಸ್ ಗಳನ್ನು ನಡೆಸಲಾಗುತ್ತಿದೆ. ಇಲ್ಲಿ ಕೊಡ ಮಾಡುವ ಇಪ್ಪತ್ತು ಕೋರ್ಸುಗಳು ಕೂಡ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕೌನ್ಸಿಲ್ ನ ಮಾನ್ಯತೆಯನ್ನು ಪಡೆದಿವೆ ಎಂದು ತಿಳಿಸಿದರು.

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರವು ತನ್ನ ಕೇಂದ್ರದ ವಿದ್ಯಾರ್ಥಿಗಳಿಗೆ ನೇರವಾಗಿ ಕೌಶಲ್ಯಗಳ ಪ್ರಾಯೋಗಿಕ ಕಲಿಕೆಗೆ ಅಗತ್ಯವಾದ ಪಠ್ಯಕ್ರಮವನ್ನು ಹಾಗೂ ಸುವ್ಯವಸ್ಥಿತ ಪ್ರಯೋಗಾಲಯಗಳನ್ನು ಹೊಂದಿದೆ. ಇಲ್ಲಿಯವರೆಗೂ ಮಣಿಪಾಲ್ ನಲ್ಲಿರುವ ಈ ಕೇಂದ್ರವು ಉಡುಪಿ ಜಿಲ್ಲೆಗಷ್ಟೇ ತನ್ನ ವ್ಯಾಪ್ತಿಯನ್ನು ಸೀಮಿತಗೊಳಿಸಿತ್ತು. ಆದರೆ ಮೊತ್ತ ಮೊದಲ ಬಾರಿಗೆ ಮಾನಸ ಸಂಸ್ಥೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಮಣಿಪಾಲ್ ನ ಕೌಶಲ್ಯ ಅಭಿವೃದ್ಧಿ ಕೇಂದ್ರದೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಿದ್ಯಾರ್ಥಿಗಳಿಗಾಗಿ ಬಿಕಾಂ ಜೊತೆಗೆ ಟ್ಯಾಲಿ ಕೋರ್ಸ್ ಗಳನ್ನು ಬಿಸಿಎ ಜೊತೆಗೆ ವಿವಿಧ ಐಟಿ ಕೋರ್ಸ್ ಗಳನ್ನು ಪ್ರಾರಂಭಿಸಲು ನಿರ್ಧಾರ ಮಾಡಿರುವುದು ಎರಡು ಸಂಸ್ಥೆಗಳ ಶೈಕ್ಷಣಿಕ ಹಾದಿಯಲ್ಲಿ ಬಹಳ ಮುಖ್ಯವಾದ ಮೈಲಿಗಲ್ಲು ಆಗಿದೆ ಎಂದರು.
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಬಿಕಾಂ ಅಥವಾ ಬಿಸಿಎ ಮಾಡುವ ವಿದ್ಯಾರ್ಥಿಗಳಿಗೆ ಟ್ಯಾಲಿ ಕೋರ್ಸ್‌ಗಳು ಹಾಗೂ ಐಟಿ ಕೋರ್ಸ್‌ಗಳು ಲಭ್ಯವಾಗಲಿರುವುದು ಅವರ ಉದ್ಯೋಗಾವಕಾಶಗಳನ್ನು ವಿಪುಲವಾಗಿ ವಿಸ್ತರಿಸಬಲ್ಲದು. ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನೊಂದಿಗೆ ಸಹಯೋಗವನ್ನು ನೀಡುವ ಮೂಲಕ ಉತ್ತಮ ಗುಣಮಟ್ಟದ ಕೌಶಲ್ಯ ತರಬೇತಿಗೆ ಬದ್ದತೆಯೊಂದಿಗೆ ಮುಂದುವರಿಯವುದು ಎಂದು ಅವರು ತಿಳಿಸಿದರು.

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಕುಲ ಸಚಿವ ಡಾ. ಅಂಜನಯ್ಯ ದೇವಿನೇನಿಯವರು ಮಾತನಾಡಿ, ಕೌಶಲ್ಯ ಅಭಿವೃದ್ಧಿ ಎಂಬುದು ಯಾವುದೇ ವಿದ್ಯಾರ್ಥಿಯು ತನ್ನ ಪದವಿಯೊಂದಿಗೆ ಪಡೆದುಕೊಳ್ಳಬೇಕಾದ ಬಹಳ ಮುಖ್ಯವಾದ ಪರಿಣತಿ. ಈ ಮೂಲಕವಾಗಿ ತನ್ನ ವೃತ್ತಿಪರತೆಯನ್ನು ಔದ್ಯೋಗಿಕ ಬದ್ಧತೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

Also read: ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರವು, ಕಟೀಲ್ ಅಶೋಕ್ ವೈ ಸ್ಮಾರಕ ಕಾಲೇಜಿಗೆ ಸಹಯೋಗವನ್ನು ನೀಡುವ ಮೂಲಕ ತನ್ನ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಪ್ರಾದೇಶಿಕವಾಗಿ ವಿಸ್ತರಿಸಿದಂತಾಗಿದೆ. ಇದು ಎರಡು ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ನೀಡಬಹುದಾದ ಅತ್ಯಮೂಲ್ಯ ಕೊಡುಗೆ ಎಂದು ಅವರು ತಿಳಿಸಿದರು.

ಮಾನಸ ಸಂಸ್ಥೆಯ ನಿರ್ದೇಶಕರಾದ ಡಾ. ರಜನಿ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಆಡಳಿತ ಅಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗಾರವರು ಮಾನಸ ಸಂಸ್ಥೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ವಿದ್ಯಾರ್ಥಿಗಳನ್ನು ಔದ್ಯೋಗಿಕವಾಗಿ ಹಾಗೂ ವೃತ್ತಿಪರತೆಯೊಂದಿಗೆ ಅಭಿವೃದ್ಧಿಪಡಿಸಲು ಈ ಒಡಂಬಡಿಕೆಯನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ತಮ್ಮ ವಿಶೇಷ ಕೌಶಲ್ಯದ ಮೂಲಕ ತಮ್ಮ ಪದವಿ ಮುಗಿಸುವ ಸಂದರ್ಭದಲ್ಲಿ ಉದ್ಯೋಗಿಕ ಕ್ಷೇತ್ರಗಳು ಇವರತ್ತ ಆಕರ್ಷಿತರಾಗುವಂತೆ ಮಾಡಬೇಕಿದೆ ಅಂತಹ ಸಾಮರ್ಥ್ಯ ಹಾಗೂ ವ್ಯಕ್ತಿತ್ವ ರೂಪಿಸುವುದು ಸಂಸ್ಥೆಯ ದೂರ ದೃಷ್ಟಿ ಎಂದು ತಿಳಿಸಿದರು.
ಇನ್ನು ಮುಂದೆ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಬಿಕಾಂ ಅಧ್ಯಯನ ಮಾಡಲಿರುವ ಎಲ್ಲ ವಿದ್ಯಾರ್ಥಿಗಳು ಕೂಡ ಪ್ರತಿಷ್ಠಿತ ಟ್ಯಾಲಿ ಕೋರ್ಸ್ ಗಳನ್ನು ಕೂಡ ಪೂರೈಸಿಕೊಳ್ಳಲಿರುವರು ಹಾಗೂ ಬಿಸಿಎ ಅಧ್ಯಯನ ಮಾಡುವ ಎಲ್ಲ ವಿದ್ಯಾರ್ಥಿಗಳಿಗೂ ವಿವಿಧ ಐಟಿ ಕೋರ್ಸ್ ಗಳನ್ನು ಮಾಡುವ ಅವಕಾಶವಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ. ಸಂಧ್ಯಾ ಕಾವೇರಿ ಅವರು ಮಾನಸ ಟ್ರಸ್ಟ್ ಹಾಗೂ ಮಣಿಪಾಲ ಶಿಕ್ಷಣ ಸಂಸ್ಥೆಗಳು ಕೊಟ್ಟಿರುವ ಅವಕಾಶವನ್ನು ನಿರ್ವಹಿಸುವ ಜವಾಬ್ದಾರಿ ಹಾಗೂ ಬದ್ಧತೆಯನ್ನು ಕಟೀಲ್ ಅಶೋಕ್ ಪೈಸ್ಮಾರಕ ಕಾಲೇಜು ಅತ್ಯಂತ ಸಂತೋಷದಿಂದ ನಿರ್ವಹಿಸುತ್ತದೆ. ಬಿಕಾಂ ಹಾಗೂ ಬಿಸಿಎ ಪದವಿಗಳು ವಿವಿಧ ಔದ್ಯೋಗಿಕ ಅವಕಾಶಗಳನ್ನು ಒದಗಿಸುತ್ತಿರುವ ಇಂದಿನ ಕಾಲದಲ್ಲಿ ಇದರೊಂದಿಗೆ ದೊರೆಯುವ ಕೌಶಲ್ಯ ಅಭಿವೃದ್ಧಿ ಕೋರ್ಸುಗಳು ಈ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿಪರ ಸಾಮರ್ಥ್ಯವನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಸಿಎ ವಿಭಾಗದ ಮುಖ್ಯಸ್ಥರಾದ ಮಂಗೇಶ್ ಪೈ, ಬಿಕಾಂ ವಿಭಾಗದ ಮುಖ್ಯಸ್ಥರಾದ ಕಾವ್ಯ ರಾಯ್ಕರ್, ಪ್ಲೇಸ್ಮೆಂಟ್ ಆಫೀಸರ್ ಅನುಮೋಲ್ ಉಪಸ್ಥಿತರಿದ್ದರು.
ಉದ್ಘಾಟನಾ ಸಮಾರಂಭದ ನಂತರ ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಡಾ. ರಾಜಲಕ್ಷ್ಮೀ ಆನಂದ್, ವಿದ್ಯಾರ್ಥಿಗಳಿಗೆ ಟ್ಯಾಲಿ ಕೋರ್ಸ್ ನ ಮೂಲಭೂತ ಅಂಶಗಳ ಸ್ಥೂಲ ಪರಿಚಯವನ್ನು ಮಾಡಿಕೊಟ್ಟರು. ಹಾಗೂ ವಿದ್ಯಾರ್ಥಿಗಳಿಗೆ ಇಂದು ಅತಿ ಅಗತ್ಯವಾಗಿ ಬೇಕಾಗಿರುವ ಪವರ್ ಬಿ ಐ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಾಗೂ ಇನ್ನಿತರ ಐಟಿ ಕೋರ್ಸ್ಗಳ ಪ್ರಾಮುಖ್ಯತೆ ಹಾಗೂ ಪ್ರಮುಖ ಅಂಶಗಳನ್ನು ಪರಿಚಯಿಸಿದರು.

ವಿದ್ಯಾರ್ಥಿನಿ ಕಾವ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಲಾವಣ್ಯ ಅತಿಥಿಗಳ ಪರಿಚಯವನ್ನು ಮಾಡಿಕೊಟ್ಟರು. ತನ್ಮಯಿ ಹಾಗೂ ಸಂಗಡಿಗರು ಪ್ರಾರ್ಥನೆಯನ್ನು ಹಾಡಿದರು .ಉದ್ಘಾಟನಾ ಕಾರ್ಯಕ್ರಮದ ವಂದನಾರ್ಪಣೆಯನ್ನು ಉಪನ್ಯಾಸಕ ಅನುಮೋಲ್ ರವರು ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Next Post

ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್

ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL