ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಅವರ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ಸಂಘದ ಪದಾಧಿಕಾರಿಗಳ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕೃಷ್ಣಾ’ದಲ್ಲಿ ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ಸಮಾಲೋಚನೆ ನಡೆಸಿ, ಮಧ್ಯ ಕರ್ನಾಟಕದ ಜನರ ಬಹುಕಾಲದ ಬೇಡಿಕೆಯಾಗಿರುವ ‘ಹೈಕೋರ್ಟ್ ಸಂಚಾರಿ ಪೀಠ’ವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವಂತೆ ಆಗ್ರಹಿಸಲಾಯಿತು.
ಬೆಂಗಳೂರಿನಿಂದ ಸುಮಾರು 250 ರಿಂದ 300 ಕಿ.ಮೀ ದೂರದಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಜನರಿಗೆ ಸುಲಭವಾಗಿ, ಶೀಘ್ರವಾಗಿ ಮತ್ತು ಕೈಗೆಟುಕುವ ವೆಚ್ಚದಲ್ಲಿ ನ್ಯಾಯಾಲಯದ ಸೌಲಭ್ಯ ಒದಗಿಸಲು ಶಿವಮೊಗ್ಗದಲ್ಲಿ ಸಂಚಾರಿ ಪೀಠದ ಸ್ಥಾಪನೆ ಅತ್ಯಗತ್ಯವಾಗಿದೆ.
ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗಸೂಚಿಗಳ ಅನ್ವಯ ಸಂಚಾರಿ ಪೀಠದ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನು ಮಧ್ಯ ಕರ್ನಾಟಕ ಭಾಗವು ಸಂಪೂರ್ಣವಾಗಿ ಹೊಂದಿದೆ.
Also read: MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ
ಸಾರ್ವಜನಿಕರ ಹಿತದೃಷ್ಠಿಯಿಂದ ಮಧ್ಯ ಕರ್ನಾಟಕ ಭಾಗದ ಕೇಂದ್ರ ಕೇಂದ್ರ ಸ್ಥಾನವಾದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಶಿವಮೊಗ್ಗದ ಹಿರಿಯ ವಕೀಲರಾದ ಬಸಪ್ಪಗೌಡ, ಕೆ.ಪಿ. ಶ್ರೀಪಾಲ್, ಲಕ್ಷ್ಮಿಕಾಂತ್ ಚಿಮಣೂರು ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Comments 1