ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಿಪ್ಪನ್ ಪೇಟೆಯ ವೈದ್ಯರೊಬ್ಬರು ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕ್ಯಾತಸಂದ್ರ ಬಳಿ ಸಂಭವಿಸಿದೆ.
ಹೊಸನಗರ ತಾಲೂಕು ರಿಪ್ಪನ್ ಪೇಟೆ ಶಬರೀಶ ನಗರದ ಡಾ. ಗುರುರಾಜ್ (46) ಮೃತಪಟ್ಟ ದುರ್ಧೈವಿಯಾಗಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕ್ಯಾತಸಂದ್ರ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗ್ರಾಮೀಣ ಭಾಗದಲ್ಲಿ ಉತ್ತಮ ವೈದ್ಯಕೀಯ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದ ಡಾ. ಗುರುರಾಜ್ ರಿಪ್ಪನ್‌ಪೇಟೆ, ಹೊಸನಗರ, ಗೌತಮಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















